ಬೆಂಗಳೂರು: ದಕ್ಷಿಣ ಮತ್ತು ಉತ್ತರ ವಿಭಾಗದ ಪೊಲೀಸರು ಮೂರು ಪ್ರತ್ಯೇಕ ಬೈಕ್ ಕಳವು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮನೆ ಎದುರು ನಿಲುಗಡೆ ಮಾಡಿದ್ದ ಬೈಕ್ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕರಿಸಂದ್ರ ನಿವಾಸಿಗಳಾದ ಶೇಖ್ ಮುಜಾಮಿಲ್ ಪಾಷಾ(25) ಮತ್ತು ಮೊಹಮ್ಮದ್ ಫಯಾಜ್(2) ಬಂಧಿತರು.
ಆರೋಪಿಗಳಿಂದ ₹4 ಲಕ್ಷ ಮೌಲ್ಯದ ಏಳು ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿಗಳು ಮೋಜಿನ ಜೀವನಕ್ಕಾಗಿ ಮನೆ ಎದುರು ನಿಲುಗಡೆ ಮಾಡಿದ್ದ ಬೈಕ್‌ಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡಿ, ಬೇರೆಡೆ ಮಾರಾಟ ಮಾಡುತ್ತಿದ್ದರು. ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಬೈಕ್‌ವೊಂದನ್ನು ಕದ್ದಿದ್ದರು. ಈ ಮಾಹಿತಿ ಮೇರೆಗೆ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಜೆ.ಪಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
₹4 ಲಕ್ಷ ಮೌಲ್ಯದ ಬೈಕ್‌ಗಳು ಜಪ್ತಿ:
ಹೋಟೆಲ್ ಎದುರು ನಿಲುಗಡೆ ಮಾಡಿದ್ದ ಬೈಕ್‌ಗಳ ಕಳವು ಮಾಡುತ್ತಿದ್ದ ಇಲಿಯಾಸ್ ನಗರದ ನಿವಾಸಿ ಸಾದಿಕ್ (23) ಎಂಬಾತನನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ₹4 ಲಕ್ಷ ಮೌಲ್ಯದ ಏಳು ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಇನ್ನೊಂದು ಪ್ರಕರಣದಲ್ಲಿ ಮನೆ ಎದುರು ನಿಲುಗಡೆ ಮಾಡಿದ್ದ ಬೈಕ್‌ಗಳ ಕಳವು ಮಾಡಿ ಬೈಕ್‌ನಲ್ಲಿ ಕೆಲವು ಬಿಡಿಭಾಗಗಳನ್ನು ತೆಗೆದು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರಿನ ತಿಲಕ್(30) ಬಂಧಿತ ಆರೋಪಿ.
ಆರೋಪಿಯಿಂದ ₹8 ಲಕ್ಷ ಮೌಲ್ಯದ ಏಳು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.