ADVERTISEMENT

ಬೆಂಗಳೂರು | ದ್ವಿಚಕ್ರ ವಾಹನ ಕಳ್ಳರ ಬಂಧನ: ₹39 ಲಕ್ಷ ಮೌಲ್ಯದ 54 ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2024, 15:57 IST
Last Updated 20 ಡಿಸೆಂಬರ್ 2024, 15:57 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿರುವ ಹೆಬ್ಬಾಳ ಹಾಗೂ ಮಹದೇವಪುರ ಠಾಣೆ ಪೊಲೀಸರು, ₹39 ಲಕ್ಷ ಮೌಲ್ಯದ 54 ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ADVERTISEMENT

ವಾಹನ ನಿಲುಗಡೆ ಸ್ಥಳಗಳು, ಮನೆ ಎದುರು ಹಾಗೂ ಮೆಟ್ರೊ ನಿಲ್ದಾಣಗಳ ಬಳಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳನ್ನು ಆರೋಪಿಗಳು ಕಳವು ಮಾಡಿ ಪರಾರಿ ಆಗುತ್ತಿದ್ದರು. ವಾಹನಗಳ ಮಾಲೀಕರು ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಕದ್ದ ವಾಹನಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಬಂಧಿತರು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದರು ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.