ADVERTISEMENT

ಮೂರು ಬೈಕ್ ವಶ:ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 4:23 IST
Last Updated 17 ಫೆಬ್ರುವರಿ 2021, 4:23 IST

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಆರೋಪಿಯನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಮಾಗಡಿ ರಸ್ತೆಯ ಗೋಪಾಲಪುರ ನಿವಾಸಿ ಜಹೀರ್ ಅಹಮದ್ (35) ಬಂಧಿತ ಆರೋಪಿ.

ಕುರುಬರಹಳ್ಳಿಯ ಅಂಗಡಿಯೊಂದರ ಬಳಿ ನಿಲ್ಲಿಸಿದ್ದ ಬೈಕ್‌ ಅನ್ನು ಆರೋಪಿ ಕದ್ದಿದ್ದ. ಈ ಸಂಬಂಧ ಬೈಕ್ ಮಾಲೀಕ ಪೊಲೀಸರಿಗೆ ದೂರು ನೀಡಿದ್ದರು.

ADVERTISEMENT

‘ಆರೋಪಿಯು ಬಸವೇಶ್ವರನಗರ ಠಾಣೆಯ ಸರಹದ್ದಿನಲ್ಲಿ ಮೂರು ದ್ವಿಚಕ್ರ ವಾಹನಗಳನ್ನು ಕದ್ದಿದ್ದ. ಆರೋಪಿಯನ್ನು ಬಂಧಿಸಲಾಗಿದ್ದು, ಮೂರು ಬೈಕ್‌ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.