ಬೆಂಗಳೂರು: ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿ ಜೈ ಶಂಕರ್‌ನನ್ನು (32) ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ.
‘ಕುರುಬರಹಳ್ಳಿ ನಿವಾಸಿ ಜೈ ಶಂಕರ್, ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ. ಆತನಿಂದ ₹ 2 ಲಕ್ಷ ಮೌಲ್ಯದ 3 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಆರೋಪಿ ಪರಾರಿಯಾಗುತ್ತಿದ್ದ. ಜೂನ್ 20ರಂದು ಲಗ್ಗೆರೆ ಆಲದ ಮರ ವೃತ್ತದ ಬಳಿ ಬೈಕ್‌ನಲ್ಲಿ ಆರೋಪಿ ಹೊರಟಿದ್ದ. ಗಸ್ತಿನಲ್ಲಿದ್ದ ಸಿಬ್ಬಂದಿ ಆತನನ್ನು ತಡೆದು ಪರಿಶೀಲನೆ ನಡೆಸಿದಾಗ ಸಿಕ್ಕಿಬಿದ್ದ’ ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.