ನ್ಯಾಯಾಲಯ
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಮೊದಲನೇ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಮತ್ತೆ 5 ದಿನ ಸಿಐಡಿ ಕಸ್ಟಡಿಗೆ ನೀಡಿ ಒಂದನೇ ಎಸಿಜೆಎಂ ನ್ಯಾಯಾಲಯ ಗುರುವಾರ ಆದೇಶಿಸಿದೆ.
ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಲೈ 15ರಂದು ಶಿವಪ್ರಕಾಶ್ ಅವರ ಕೊಲೆ ನಡೆದಿತ್ತು.
ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿತ್ತು. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಜಗದೀಶ್‌ನನ್ನು ಇತ್ತೀಚೆಗೆ ಸಿಐಡಿ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದರು. ಬಳಿಕ ನಗರಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯವು 10 ದಿನ ಸಿಐಡಿ ಕಸ್ಟಡಿಗೆ ನೀಡಿತ್ತು. ಕಸ್ಟಡಿ ಅವಧಿ ಗುರುವಾರಕ್ಕೆ ಮುಕ್ತಾಯವಾದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.
ವಿಚಾರಣೆ ಬಾಕಿ ಇರುವುದನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿ, ಇನ್ನೂ ಹತ್ತು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೋರಿದರು. ನ್ಯಾಯಾಲಯವು ಐದು ದಿನ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.