ADVERTISEMENT

ಬಿಕ್ಲು ಶಿವು ಕೊಲೆ: ನಾಲ್ವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2025, 20:36 IST
Last Updated 28 ನವೆಂಬರ್ 2025, 20:36 IST
<div class="paragraphs"><p>ಹೈಕೋರ್ಟ್‌</p></div>

ಹೈಕೋರ್ಟ್‌

   

ಬೆಂಗಳೂರು: ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ಜಾಮೀನು ಕೋರಿ ಕಿರಣ್‌ (ಆರೋಪಿ-2), ವಿಮಲ್‌ ರಾಜ್‌ (ಎ-3), ಪ್ರದೀಪ್‌ (ಎ-6) ಮತ್ತು ಆರ್‌.ಮದನ್‌ (ಎ-7) ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್‌ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್‌.ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.

ADVERTISEMENT

ಭಾರತಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ಮಿನಿ ಅವೆನ್ಯೂ ರಸ್ತೆಯಲ್ಲಿರುವ ಸೇಫ್‌ ಮೆಡಿಕಲ್‌ ಸ್ಟೋರ್‌ ಮುಂಭಾಗ ಶಿವಪ್ರಕಾಶ್‌ ಅಲಿಯಾಸ್ ಬಿಕ್ಲು ಶಿವುನನ್ನು 2025ರ ಜುಲೈ 15ರಂದು 8 ರಿಂದ 9 ಜನರಿದ್ದು ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿತ್ತು. ಈ ಸಂಬಂಧ ಭಾರತಿನಗರ ಠಾಣಾ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿ ಪೊಲೀಸರಿಗೆ ವಹಿಸಲಾಗಿದೆ. ಪ್ರಕರಣದಲ್ಲಿ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌ ಐದನೇ ಆರೋಪಿಯಾಗಿದ್ದಾರೆ.

ತನಿಖೆ ನಡೆಸಿದ್ದ ಪೊಲೀಸರು ಅರ್ಜಿದಾರ ಆರೋಪಿಗಳನ್ನು ಬಂಧಿಸಿದ್ದರು. ‘ಪ್ರಕರಣ ದಾಖಲಾಗಿ 90 ದಿನ ಕಳೆದಿದ್ದರೂ ತನಿಖಾಧಿಕಾರಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿಲ್ಲ’ ಎಂಬ ಕಾರಣಕ್ಕೆ ಆರೋಪಿಗಳು ಡಿಫಾಲ್ಟ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಗರದ 82ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ 2025ರ ಅಕ್ಟೋಬರ್ 17ರಂದು ವಜಾಗೊಳಿಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.