ADVERTISEMENT

ರೌಡಿ ಶೀಟರ್ ಬಿಕ್ಲು ಶಿವು ಕೊಲೆ: ಡಿಸಿಪಿ, ಎಸಿಪಿ, ಇನ್‌ಸ್ಪೆಕ್ಟರ್ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 15:31 IST
Last Updated 18 ಜುಲೈ 2025, 15:31 IST
<div class="paragraphs"><p>ಪೊಲೀಸ್‌ (ಸಾಂಧರ್ಭಿಕ ಚಿತ್ರ)</p></div>

ಪೊಲೀಸ್‌ (ಸಾಂಧರ್ಭಿಕ ಚಿತ್ರ)

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಜೀವ ಬೆದರಿಕೆಯಿದೆ ಎಂದು ದೂರು ನೀಡಿದ ವ್ಯಕ್ತಿಗೆ ಯಾವುದೇ ರಕ್ಷಣೆ ನೀಡದೇ ನಿರ್ಲಕ್ಷ್ಯ ವಹಿಸಿದ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರಿಗೆ ಹೋರಾಟಗಾರ ಕೆ.ಪಿ.ವೆಂಕಟಾಚಲಪತಿ ಅವರು ದೂರು ನೀಡಿದ್ದಾರೆ.

ADVERTISEMENT

ಪೂರ್ವ ವಿಭಾಗದ ಡಿಸಿಪಿ ದೇವರಾಜ್‌, ಪುಲಿಕೇಶಿ ನಗರ ಉಪ ವಿಭಾಗದ ಎಸಿಪಿ ಸಿ.ಆರ್‌.ಗೀತಾ, ಭಾರತಿನಗರ ಪೊಲೀಸ್‌ ಇನ್‌ಸ್ಪೆಕ್ಟರ್‌ ಗೋವಿಂದರಾಜು, ಬಾಣಸವಾಡಿ ಉಪ ವಿಭಾಗದ ಎಸಿಪಿ ಉಮಾಶಂಕರ್‌, ರಾಮಮೂರ್ತಿನಗರ ಇನ್‌ಸ್ಪೆಕ್ಟರ್‌ ರಾಜಶೇಖರ್‌ ಮತ್ತು ಕೆಆರ್‌ ಪುರ ಶಾಸಕ ಬೈರತಿ ಬಸವರಾಜ್‌ ವಿರುದ್ಧ ಶಿವಪ್ರಕಾಶ್‌ ಕೊಲೆ ಪ್ರಕರಣದಲ್ಲಿ ಕ್ರಿಮಿನಲ್‌ ಕೇಸ್‌ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

‘ಜೀವ ಬೆದರಿಕೆಯಿದೆ ಎಂದು ಹೇಳಿ ಫೆಬ್ರುವರಿ 18ರಂದು ಶಿವಪ್ರಕಾಶ್ ಅವರು ನಗರ ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ್ದರು. ಒಬ್ಬ ವ್ಯಕ್ತಿ ಜೀವಭಯವಿದೆ ಎಂದು ದೂರು ನೀಡಿದ್ದರೂ ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕರ್ತವ್ಯ ಲೋಪ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.