ADVERTISEMENT

ಜೀವ ವೈವಿಧ್ಯ ರಕ್ಷಣೆ ಎಲ್ಲರ ಹೊಣೆ: ಅನಿತಾ ಅರೇಕಲ್

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2021, 19:30 IST
Last Updated 11 ಆಗಸ್ಟ್ 2021, 19:30 IST
ಪರಿಸರವಾದಿ ಸಿದ್ದು ಬಂಡಿ, ಜಲ ವೈವಿಧ್ಯ ಸಂರಕ್ಷಕ ಕ್ಯಾಪ್ಟನ್ ಸಂತೋಷ್ ಚಂದಾಪುರ, ಪರಿಸರವಾದಿ ಮೋಹನದಾಸ್ ಹೆಬ್ಬಾರ್ ಅವರನ್ನು ಸನ್ಮಾನಿಸಲಾಯಿತು. ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ನೋಮೇಶ್ ಕುಮಾರ್, ಮುಖ್ಯ ಲೆಕ್ಕಾಧಿಕಾರಿ ಕೆ. ಲಲಿತಾ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಂಗಪ್ಪ, ಸುರೇಶ್ ಹಾಗೂ ಅಮರಪ್ಪ ಇದ್ದರು –ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಜಾಗತಿಕ ತಾಪಮಾನ ಏರಿಕೆಯಾಗುತ್ತಿರುವ ಕಾರಣ ಜೀವಸಂಕುಲವೇ ಅಪಾಯದಲ್ಲಿದೆ. ಜೀವ ವೈವಿಧ್ಯದ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು’ ಎಂದು ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ಅರೇಕಲ್ ಹೇಳಿದರು.

ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸಾಮಾಜಿಕ ಅರಣ್ಯ ವಿಭಾಗದಿಂದನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಜೀವ ವೈವಿಧ್ಯ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಜನರ ಆರೋಗ್ಯದ ಜತೆಗೆ ಜೀವ ವೈವಿಧ್ಯ ಕಾಪಾಡುವಂತಹ ಜೀವ ಸಂಕುಲವನ್ನು ರಕ್ಷಣೆ ಮಾಡಬೇಕು. ಸಾವಯವ ಪದ್ಧತಿಯ ಮೂಲಕ ಪಾರಂಪರಿಕ ಕೃಷಿಗೆ ಒತ್ತು ನೀಡಿದರೆ ಪೋಷಕಾಂಶದ ಜತೆಗೆ ಜೀವವೈವಿಧ್ಯದ ರಕ್ಷಣೆಯೂ ಸಾಧ್ಯ’ ಎಂದು ಪ್ರತಿಪಾದಿಸಿದರು.

ADVERTISEMENT

‘ಇದಕ್ಕಾಗಿ ಗ್ರಾಮ ಮಟ್ಟದಲ್ಲಿ ಜೀವವೈವಿಧ್ಯ ನಿರ್ವಹಣಾ ಸಮಿತಿಗಳನ್ನು ರಚಿಸುವ ಮೂಲಕವೂ ಜಾಗೃತಿ ಮೂಡಿಸುವ ಕೆಲಸವಾಗಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.