ADVERTISEMENT

ಸುರ್ಜೇವಾಲಾ ವಿರುದ್ಧ ಬಿಜೆಪಿ ದೂರು

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2019, 20:08 IST
Last Updated 25 ಮಾರ್ಚ್ 2019, 20:08 IST
ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್ ಅವರಿಗೆ ಅರವಿಂದ ಲಿಂಬಾವಳಿ ನೇತೃತ್ವದ ನಿಯೋಗ ದೂರು ಸಲ್ಲಿಸಿತು. ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್, ವಕ್ತಾರರಾದ ಎಸ್. ಪ್ರಕಾಶ್, ಎ.ಎಚ್. ಆನಂದ್ ಇದ್ದರು
ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್ ಅವರಿಗೆ ಅರವಿಂದ ಲಿಂಬಾವಳಿ ನೇತೃತ್ವದ ನಿಯೋಗ ದೂರು ಸಲ್ಲಿಸಿತು. ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್, ವಕ್ತಾರರಾದ ಎಸ್. ಪ್ರಕಾಶ್, ಎ.ಎಚ್. ಆನಂದ್ ಇದ್ದರು   

ಬೆಂಗಳೂರು: ‘ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸಿಂಗ್‌ ಸುರ್ಜೇವಾಲಾ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ’ ಎಂದು ಬಿಜೆಪಿ ನಿಯೋಗವು ಚುನಾವಣಾ ಆಯೋಗಕ್ಕೆ ಸೋಮವಾರ ದೂರು ನೀಡಿದೆ.

ಯಡಿಯೂರಪ್ಪ ಅವರಿಗೆ ದಿನಚರಿ ಬರೆಯುವ ಅಭ್ಯಾಸವೇ ಇಲ್ಲ. ಆದರೂ ಅವರ ಹಸ್ತಾಕ್ಷರವನ್ನು ಹೋಲುವಂತೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಮಾಧ್ಯಮಗೋಷ್ಠಿಯಲ್ಲಿ ಸುರ್ಜೇವಾಲಾ ಅವರು ಬಿಡುಗಡೆ ಮಾಡಿದ್ದಾರೆ. ಅಲ್ಲದೇ ‘ದಿ ಕ್ಯಾರವಾನ್‌’ನಲ್ಲಿ ತಮಗೆ ಬೇಕಾದಂತೆ ವರದಿ ಪ್ರಕಟವಾಗುವಂತೆ ನೋಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಬಿಜೆಪಿ ಆರೋಪಿಸಿದೆ.

ಅವರು ಬಿಡುಗಡೆ ಮಾಡಿರುವುದು ನಕಲಿ ಡೈರಿ ಎಂಬುದನ್ನು ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ, ಸುಳ್ಳು ಮಾಹಿತಿ ಹರಡಿದ ಸುರ್ಜೇವಾಲಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಈ ರೀತಿಯ ಸುಳ್ಳು ಆರೋಪ ಮಾಡದಂತೆ ಕಾಂಗ್ರೆಸ್‌ಗೆ ನಿರ್ದೇಶನ ನೀಡಬೇಕು ಎಂದು ನಿಯೋಗದ ನೇತೃತ್ವ ವಹಿಸಿದ್ದ ಬಿಜೆ‍ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.