ADVERTISEMENT

ಆರೋಗ್ಯ ಹಿತ ಮರೆತು ಪ್ರತಿಭಟನೆ: ಬಿಜೆಪಿ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 20:53 IST
Last Updated 29 ಜೂನ್ 2020, 20:53 IST
ಎನ್‌.ರವಿಕುಮಾರ್‌
ಎನ್‌.ರವಿಕುಮಾರ್‌    

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವಾಗಲೇ ಕಾಂಗ್ರೆಸ್‌ ನಾಯಕರು ಸಾಮಾಜಿಕ ಹೊಣೆಗಾರಿಕೆ ಮರೆತು ಪ್ರತಿಭಟನೆ ನಡೆಸಿದ್ದಾರೆ ಎಂದು ಬಿಜೆಪಿ ಕಟುವಾಗಿ ಟೀಕಿಸಿದೆ.

ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಆದರೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಮತ್ತು ಇತರರು ಸಾರ್ವಜನಿಕರ ಆರೋಗ್ಯದ ಹಿತವನ್ನು ಮರೆತು ಸೈಕಲ್‌ ಜಾಥಾವನ್ನೂ ನಡೆಸಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಅವರು ಹೇಳಿದ್ದಾರೆ.

‘ಕಾಂಗ್ರೆಸ್ ಪ್ರತಿಭಟನೆಯನ್ನು ನಾವು ವಿರೋಧಿಸುವುದಿಲ್ಲ. ಆದರೆ, ಈ ಸನ್ನಿವೇಶದಲ್ಲಿ ಜನರನ್ನು ಸೇರಿಸಿ ಬಲ ಪ್ರದರ್ಶನ ಮಾಡುವ ಅಗತ್ಯವೇನಿತ್ತು’ ಎಂದು ಅವರು ಪ್ರಶ್ನಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.