
ಪ್ರಜಾವಾಣಿ ವಾರ್ತೆಪ್ರಿಯಾಂಕ್ ಖರ್ಗೆ
ಬೆಳಗಾವಿ: ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ಗುರಿಯಾಗಿಸಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ ಮತ್ತು ಇಲಾಖಾ ವೈಫಲ್ಯಗಳನ್ನು ವಿಧಾನಮಂಡಲದಲ್ಲಿ ಪ್ರಸ್ತಾಪಿಸಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಮತ್ತು ಪೊಲೀಸರೇ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ವಿಷಯವನ್ನು ಮುಂದಿನ ವಾರ ಪ್ರಸ್ತಾಪಿಸಲಿದೆ. ಅಲ್ಲದೇ, ಪರಿಶಿಷ್ಟರಿಗೆ ಮೀಸಲಾದ ಅನುದಾನದ ದುರ್ಬಳಕೆ ವಿಷಯವಾಗಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ನಿರ್ಧರಿಸಲಾಗಿದೆ.
ಸದನದಲ್ಲಿ ಎಲ್ಲರೂ ಒಗ್ಗಟಿನಿಂದ ಸರ್ಕಾರದ ವಿರುದ್ಧ ಮುಗಿ ಬೀಳಲು ನಿರ್ಧರಿಸಲಾಯಿತು ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.