ಬೆಂಗಳೂರು: ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಮತ್ತು ಇತರರು ಶನಿವಾರ ಬೆಳಿಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.
‘ಇದೊಂದು ಸೌಹಾರ್ದ ಭೇಟಿ’ ಎಂದು ಬಿಜೆಪಿ ನಿಯೋಗ ಸ್ಪಷ್ಟಪಡಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ‘ನನ್ನ ಮನೆಗೆ ಎಲ್ಲ ಪಕ್ಷದ ನಾಯಕರು ಬರುತ್ತಾರೆ. ಅದೇ ರೀತಿ ಬಿಜೆಪಿಯವರೂ ಬಂದಿದ್ದಾರೆ’ ಎಂದು ಹೇಳಿದರು.
ಮಾತುಕತೆಯ ಸಂದರ್ಭದಲ್ಲಿ ರಾಮಲಿಂಗಾರೆಡ್ಡಿ ಅವರ ನಿರ್ಧಾರದಲ್ಲಿ ಬದಲಾವಣೆ ಏನಾದರೂ ಆಗಿದೆಯೇ ಎಂಬುದನ್ನು ಬಿಜೆಪಿ ನಾಯಕರು ತಿಳಿದುಕೊಳ್ಳಲು ಪ್ರಯತ್ನಿಸಿದರು. ತಾವು ಒಮ್ಮೆ ತೆಗೆದುಕೊಂಡು ನಿರ್ಧಾರದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ರಾಮಲಿಂಗಾರೆಡ್ಡಿ ಅವರು ಹೇಳಿದರೆಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.