ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ.ರಾಜೀವ್ ಸೇರಿ ಐವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಜಿ.ಮಾರುತಿ ದೂರಿನ ಮೇರೆಗೆ ಪಿ.ರಾಜೀವ್, ಎಸ್.ಹರೀಶ್, ಸಿ.ಎಂ.ಶಿವಕುಮಾರ್, ರವಿ ಪವಾರ್, ವಿಶ್ವನಾಥ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 10ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಒಳ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆದಿತ್ತು. ಪ್ರತಿಭಟನಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು.
ಬ್ಯಾರಿಕೇಡ್‍ಗಳನ್ನು ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಸಾರ್ವಜನಿಕರ ವಾಹನ ಸಂಚಾರಕ್ಕೂ ಅಡ್ಡಿಯುಂಟಾಗಿತ್ತು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.