ADVERTISEMENT

ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಒತ್ತಡ: ಬಿಜೆಪಿ ನಾಯಕರ ಸಭೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 18:45 IST
Last Updated 2 ಆಗಸ್ಟ್ 2025, 18:45 IST
<div class="paragraphs"><p>ಬಿಬಿಎಂಪಿ</p></div>

ಬಿಬಿಎಂಪಿ

   

ಬೆಂಗಳೂರು: ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಮತ್ತು ಕಾನೂನು ಹೋರಾಟ ನಡೆಸುವ ಸಂಬಂಧ ಬೆಂಗಳೂರು ನಗರ ವ್ಯಾಪ್ತಿಯ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ.

ಪಕ್ಷದ ಬೆಂಗಳೂರು ನಗರ ಕಚೇರಿಯಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಸಿ.ಕೆ.ರಾಮಮೂರ್ತಿ, ಬಿಬಿಎಂಪಿಯ ಮಾಜಿ ಸದಸ್ಯರು ಶನಿವಾರ ಸಭೆ ನಡೆಸಿ, ಈ ಬಗ್ಗೆ ಚರ್ಚೆ ನಡೆಸಿದ್ದಾರೆ.

ADVERTISEMENT

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದರೆ ಚುನಾವಣಾ ಸಮೀಕರಣ ಬದಲಾಗುತ್ತದೆ. ಚುನಾಯಿತ ಜನಪ್ರತಿನಿಧಿಗಳ ಅಧಿಕಾರ ಕಡಿಮೆಯಾಗುತ್ತದೆ ಎಂಬುದರ ಬಗ್ಗೆಯೂ ಚರ್ಚೆಯಾಗಿದೆ. ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.