
ಪ್ರಜಾವಾಣಿ ವಾರ್ತೆ
ಬೆಂಗಳೂರು: ಪಕ್ಷ ಸಂಘಟನೆಗಾಗಿ ಬಿಜೆಪಿ ನಾಯಕರು ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ಮೂರು ವಿಭಾಗಗಳಲ್ಲಿ ತಲಾ ಒಂದೊಂದು ತಂಡ ಪ್ರವಾಸ ಮಾಡಲಿವೆ. ಮೂರು ವಿಭಾಗಗಳಲ್ಲಿ ತಲಾ ಮೂರು ಸ್ಥಳಗಳಲ್ಲಿ ತಲಾ ಎರಡು ದಿನಗಳ ಸಭೆ ನಡೆಸಲಾಗುವುದು. ಬೂತ್ ಹಂತದ ಸಮಿತಿಗಳು, ಮಂಡಲ ಮತ್ತು ಜಿಲ್ಲಾ ಮಟ್ಟದ ಸಮಿತಿಗಳ ಸಭೆ ನಡೆಸಲಾಗುವುದು ಎಂದರು.
ಬಿ.ಎಸ್. ಯಡಿಯೂರಪ್ಪ, ನಾನು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ಎಲ್ಲ ನಾಯಕರೂ ಪ್ರವಾಸದಲ್ಲಿ ಭಾಗಿಯಾಗುತ್ತೇವೆ. ಪಕ್ಷ ಸಂಘಟನೆಗಾಗಿ ಈ ಪ್ರವಾಸ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.