ಕೆ.ಆರ್.ಪುರ: ಬಿಜೆಪಿಯ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಪಕ್ಷವನ್ನು ಬಲ ಪಡಿಸಬೇಕು ಎಂದು ಪಾಲಿಕೆ ಮಾಜಿ ಸದಸ್ಯ ಜಯಪ್ರಕಾಶ್ ತಿಳಿಸಿದರು.
ಕೆ.ಆರ್.ಪುರ ಸಮೀಪದ ಬಸವನಪುರದಲ್ಲಿ ಹಮ್ಮಿಕೊಂಡಿದ್ದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
’ಪ್ರತೀ ಬೂತ್‌ನಿಂದ 300 ಜನರನ್ನು ಸದಸ್ಯರನ್ನಾಗಿಸುವ ಮೂಲಕ ಪಕ್ಷವನ್ನು ಬಲಪಡಿಸಬೇಕಿದೆ’ ಎಂದು ಹೇಳಿದರು.
‘ಬಸವನಪುರ ವಾರ್ಡ್‌ನಿಂದ 15 ಸಾವಿರ ಸದಸ್ಯತ್ವ ಮಾಡಿಸಬೇಕು’ ಎಂದು ಕೆ.ಆರ್.ಪುರ ಮಂಡಲ ಅಧ್ಯಕ್ಷ ಮುನೇಗೌಡ ಹೇಳಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಶ್ರೀರಾಮುಲು, ಮುಖಂಡರಾದ ಉದಯ್ ಕುಮಾರ್, ರಾಜೇಂದ್ರ, ಗಿರೀಶ್, ಇಂದ್ರಮ್ಮ, ಲಕ್ಷ್ಮೀ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.