ಬೆಂಗಳೂರು: ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು ಮಂಗಳವಾರ ರಾತ್ರಿ ನಡೆದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಸಂಬಂಧ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಜಗದೀಶ್, ಕಿರಣ್, ವಿಮಲ್, ಅನಿಲ್ ವಿರುದ್ದವೂ ಎಫ್ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಕೊಲೆಯಾದ ಶಿವಪ್ರಕಾಶ್ ತಾಯಿ ಐವರ ವಿರುದ್ಧ ದೂರು ನೀಡಿದ್ದಾರೆ.
'ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಯಾರೇ ಸುಮ್ಮನೆ ದೂರು ನೀಡಿದರೂ ಎಫ್‌ಎಆರ್ ದಾಖಲಿಸಬಹುದೇ? ಎಫ್‌ಐಆರ್ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ' ಎಂದು ಭೈರತಿ ಬಸವರಾಜ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.