ನೆಲಮಂಗಲ: ಅಗತ್ಯ ವಸ್ತುಗಳ ಬೆಲೆ ಏರಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ವಾಲ್ಮೀಕಿ ನಿಗಮದ ಹಗರಣಗಳೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಬಿಜೆಪಿ ರಾಜ್ಯ ವಕ್ತಾರ ವೆಂಕಟೇಶ್ ದೊಡ್ಡೇರಿ ತಿಳಿಸಿದರು.
‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ₹52 ಸಾವಿರ ಕೋಟಿಯಲ್ಲಿ ₹ 40ಸಾವಿರ ಕೋಟಿ ಹಣವನ್ನು ಸರ್ಕಾರ ಗ್ಯಾರಂಟಿಗೆ ಬಳಕೆ ಮಾಡಿಕೊಂಡು ಪರಿಶಿಷ್ಟರಿಗೆ ಅನ್ಯಾಯ ಮಾಡಿದೆ. ಸುಪ್ರೀಂ ಕೋರ್ಟ್ ಅದೇಶ ಉಲ್ಲಂಘಿಸಿ ಧರ್ಮ ಆಧರಿತ ಮೀಸಲಾತಿ ಜಾರಿ ಸೇರಿದಂತೆ ಭ್ರಷ್ಟಾಚಾರದಲ್ಲಿ ರಾಜ್ಯ ಸರ್ಕಾರ ಮುಳುಗಿದೆ. ಎರಡು ಸಾವಿರ ರೈತರ ಆತ್ಮಹತ್ಯೆ, ಒಂದು ಸಾವಿರಕ್ಕೂ ಹೆಚ್ಚು ಬಾಣಂತಿಯರ ಸಾವು ಆಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಜಗದೀಶ್ ಚೌಧರಿ ಮಾತನಾಡಿ, ‘ಸಮಾವೇಶ ಹೆಸರಿನಲ್ಲಿ ಜನಸಾಮಾನ್ಯರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ. ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಒಳ ಚರಂಡಿ, ಕುಡಿಯುವ ನೀರು, ಬಸ್ ನಿಲ್ದಾಣ, ಕೆರೆಗಳ ಅಭಿವೃದ್ಧಿಯಾಗಿಲ್ಲ’ ಎಂದರು.
ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣಪ್ಪ, ಮಾಜಿ ಶಾಸಕ ಎಂ.ವಿ.ನಾಗರಾಜು, ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಮಲ್ಲಯ್ಯ, ಮಾಜಿ ಸದಸ್ಯ ರಮೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ್, ಬಿಜೆಪಿ ರಾಜ್ಯ ಮಾಧ್ಯಮ ಸಹ ಸಂಚಾಲಕ ಶ್ರೀನಾಥ್, ಪುರಸಭೆ ಮಾಜಿ ಅಧ್ಯಕ್ಷ ರವಿ, ಎಸ್‌ಟಿ ಮೋರ್ಚಾ ತಾಲ್ಲೂಕು ಘಟಕದ ಅಧ್ಯಕ್ಷ ಕೆಂಪರಾಮಯ್ಯ, ಅರಿಶಿನಕುಂಟೆ ಶಕ್ತಿಕೇಂದ್ರ ಅಧ್ಯಕ್ಷ ಉಮೇಶ್, ಮುಖಂಡ ಸಪ್ತಗಿರಿಶಂಕರ್ ನಾಯಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.