ADVERTISEMENT

ಬೆಂಗಳೂರು | ಖಾಸಗಿ ವಿಡಿಯೊ ಬ್ಲ್ಯಾಕ್‌ಮೇಲ್: ಪತಿ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2023, 14:05 IST
Last Updated 7 ಅಕ್ಟೋಬರ್ 2023, 14:05 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ‘ನನ್ನ ಖಾಸಗಿ ವಿಡಿಯೊ ಚಿತ್ರೀಕರಿಸಿಟ್ಟುಕೊಂಡಿರುವ ಪತಿ, ₹ 10 ಲಕ್ಷ ಕೊಡುವಂತೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿ 28 ವರ್ಷದ ಮಹಿಳೆಯೊಬ್ಬರು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

‘ಕಂಪನಿ ಮಾಲೀಕನೆಂದು ಸುಳ್ಳು ಹೇಳಿದ್ದ ಪತಿ, 2022ರಲ್ಲಿ ನನ್ನನ್ನು ಮದುವೆಯಾಗಿದ್ದಾರೆ. ಮದುವೆ ನಂತರ, ಹಲವೆಡೆ ಸುತ್ತಾಡಿದ್ದೆವು. ಇದೇ ಸಂದರ್ಭದಲ್ಲಿ ನನ್ನ ಖಾಸಗಿ ವಿಡಿಯೊಗಳನ್ನು ಚಿತ್ರೀಕರಿಸಿಟ್ಟುಕೊಂಡಿದ್ದರು’ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

‘ಮದುವೆ ಬಳಿಕ ಪತಿ, ಕೆಲಸಕ್ಕೆ ಹೋಗುತ್ತಿಲ್ಲ. ನನ್ನ ಸಂಬಳ ತಮಗೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ₹ 10 ಲಕ್ಷ ತಂದುಕೊಡದಿದ್ದರೆ, ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸುತ್ತಿದ್ದಾರೆ. ಕಿರುಕುಳ ಪ್ರಶ್ನಿಸಿದರೆ ಹಲ್ಲೆ ಮಾಡುತ್ತಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.