ADVERTISEMENT

ಗೃಹರಕ್ಷಕ ದಳದ ಮಹಿಳಾ ಸಿಬ್ಬಂದಿಗೆ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2020, 19:42 IST
Last Updated 1 ಮಾರ್ಚ್ 2020, 19:42 IST

ಬೆಂಗಳೂರು: ‘ಕಾನ್‌ಸ್ಟೆಬಲ್‌ ಹೆಸರು ಹೇಳಿಕೊಂಡು ಕರೆ ಮಾಡುತ್ತಿರುವ ಅಪರಿಚಿತ ವ್ಯಕ್ತಿಯೊಬ್ಬ, ಹಣಕ್ಕೆ ಬೇಡಿಕೆ ಇಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ’ ಎಂದು ಆರೋಪಿಸಿ ಗೃಹರಕ್ಷಕ ದಳದ ಮಹಿಳಾ ಸಿಬ್ಬಂದಿಯೊಬ್ಬರು ಕಮರ್ಷಿಯಲ್ ಸ್ಟ್ರೀಟ್ ಠಾಣೆಗೆ ದೂರು ನೀಡಿದ್ದಾರೆ.

‘ನಮ್ಮ ಮೆಟ್ರೊ ನಿಲ್ದಾಣದಲ್ಲಿ ಕೆಲಸ ಮಾಡುವ ಗೃಹರಕ್ಷಕ ದಳದ ಮಹಿಳಾ ಸಿಬ್ಬಂದಿ ದೂರು ನೀಡಿದ್ದಾರೆ. ಅಪರಿಚಿತನ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಕರ್ತವ್ಯದ ವೇಳೆಯಲ್ಲಿ ಗೃಹರಕ್ಷಕ ದಳದ ಮಹಿಳಾ ಸಿಬ್ಬಂದಿಗೆ ಕಾನ್‌ಸ್ಟೆಬಲ್‌ ಒಬ್ಬರ ಪರಿಚಯ ಆಗಿತ್ತು. ಅವರಿಬ್ಬರು ಆಗಾಗ ಭೇಟಿಯಾಗುತ್ತಿದ್ದರು. ಅದೇ ಕಾನ್‌ಸ್ಟೆಬಲ್ ಹೆಸರು ಹೇಳಿಕೊಂಡು ಅಪರಿಚಿತ ವ್ಯಕ್ತಿ ಮಹಿಳೆಗೆ ಕರೆ ಮಾಡುತ್ತಿದ್ದಾನೆ. ಖಾಸಗಿ ಫೋಟೊ ಹಾಗೂ ವಿಡಿಯೊ ಇರುವುದಾಗಿ ಹೇಳುತ್ತಿದ್ದಾನೆ. ಕೇಳಿದಷ್ಟು ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಹಾಗೂ ವಿಡಿಯೊ ಅಪ್‌ಲೋಡ್‌ ಮಾಡುವುದಾಗಿ ಬೆದರಿಸುತ್ತಿದ್ದಾನೆ’ ಎಂದು ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.