ADVERTISEMENT

ಲ್ಯಾಪ್‌ಟಾಪ್‌ಗೆ ಆಗ್ರಹಿಸಿ ಅಂಧರ ಪ್ರತಿಭಟನೆ ಇಂದು

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 19:39 IST
Last Updated 10 ಫೆಬ್ರುವರಿ 2020, 19:39 IST

ಬೆಂಗಳೂರು: ಅಂಧ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್‌ ನೀಡುವುದನ್ನು ನಿಲ್ಲಿಸಲಾಗಿದೆ ಎಂದು
ಆರೋಪಿಸಿ ರಾಷ್ಟ್ರೀಯ ಅಂಧರ ಒಕ್ಕೂಟದ ರಾಜ್ಯ ಯುವ ಸಮಿತಿ ವತಿಯಿಂದ ಇದೇ 11ರಂದು ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ಸಮಿತಿ ಸಂಯೋಜಕ ವೀರೇಶ್, ‘ಇಲಾಖೆ 2015ರಿಂದ 2017ರವರೆಗೆ ಅಂಧ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಿಸಲಾಗಿದೆ. 2018ರಿಂದ ಇಲ್ಲಿವರೆಗೆ ಲ್ಯಾಪ್‌ಟಾಪ್ ವಿತರಿಸಿಲ್ಲ’ ಎಂದರು.

‘ವಿವಿಧ ಕಾರಣಗಳಿಂದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿಲ್ಲ ಎಂದು ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ವಿಳಂಬ ಧೋರಣೆಯಿಂದ ಅಂಧರ ಶೈಕ್ಷಣಿಕ ಚಟುವಟಿಕೆಗೆ ಹಿನ್ನಡೆಯಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.