ADVERTISEMENT

ರಕ್ತದ ಕ್ಯಾನ್ಸರ್: ಆಕರಕೋಶ ದಾನಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 15:54 IST
Last Updated 5 ಜುಲೈ 2022, 15:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ದೇಶದಲ್ಲಿ ಪ್ರತಿವರ್ಷ ಲಕ್ಷಕ್ಕೂ ಅಧಿಕ ಮಂದಿ ರಕ್ತದ ಕ್ಯಾನ್ಸರ್‌ಗೆ ಒಳಪಡುತ್ತಿದ್ದಾರೆ.ಆರೋಗ್ಯವಂತ ವ್ಯಕ್ತಿಗಳು ರಕ್ತದ ಆಕರಕೋಶ ದಾನ ಮಾಡುವ ಮೂಲಕ ರೋಗಿಗಳ ಚೇತರಿಕೆಗೆ ನೆರವಾಗಬೇಕು’ ಎಂದುಡಿಕೆಎಂಎಸ್–ಬಿಎಂಎಸ್‌ಟಿ ಫೌಂಡೇಷನ್ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ಯಾಟ್ರಿಕ್ ಪಾಲ್‍ ಮನವಿ ಮಾಡಿಕೊಂಡಿದ್ದಾರೆ.

‘ರಕ್ತದ ಕ್ಯಾನ್ಸರ್‌ ಹಾಗೂ ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳನ್ನು ಕಾಪಾಡಲು ರಕ್ತದ ಆಕರ ಕೋಶ ಸಹಾಯಕ. ದಾನಿಗಳ ರಕ್ತದಿಂದ ಆಕರ ಕೋಶಗಳನ್ನು ಪಡೆದು, ಅಸ್ಥಿಮಜ್ಜೆ ಹಾಳಾಗಿರುವಂತಹ ರೋಗಿಗಳಿಗೆ ಕಸಿ ಮಾಡಲಾಗುತ್ತದೆ. ಇದು ಅಗತ್ಯವಿರುವಂತಹ ರೋಗಿಗಳ ಕುಟುಂಬದಲ್ಲಿ ಹೊಂದಾಣಿಕೆಯಾಗಬಲ್ಲ ದಾನಿಗಳು ಸಿಗುವುದು ಶೇ 30ರಷ್ಟು ಮಾತ್ರ. ಉಳಿದವರು ಸಂಬಂಧಿಗಳಲ್ಲದ ದಾನಿಗಳ ಮೇಲೆ ಅವಲಂಬಿತರಾಗಬೇಕಾಗುತ್ತದೆ’ ಎಂದುಹೇಳಿದ್ದಾರೆ.

‘ಕೋವಿಡ್ ಕಾಣಿಸಿಕೊಂಡ ಬಳಿಕ ರಕ್ತದ ಆಕರ ಕೋಶ ದಾನಿಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ.ಇದರಿಂದಾಗಿ ಅಸ್ಥಿಮಜ್ಜೆ ಕಸಿಗೆ ಎದುರುನೋಡುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಆರಂಭಿಕ ಹಂತದಲ್ಲಿಯೆ ರೋಗಿಗೆ ಹೊಂದಾಣಿಕೆಯಾಗುವ ದಾನಿ ಸಿಕ್ಕಲ್ಲಿ ವ್ಯಕ್ತಿ ಬೇಗ ಚೇತರಿಸಿಕೊಳ್ಳುತ್ತಾನೆ’ ಎಂದು ತಿಳಿಸಿದ್ದಾರೆ.

ADVERTISEMENT

‘ರಕ್ತದ ಆಕರ ಕೋಶಗಳು ಆರು ವಾರಗಳಲ್ಲಿ ಮತ್ತೆ ಬೆಳೆಯುತ್ತವೆ.ರಕ್ತದಿಂದ ಆಕರ ಕೋಶಗಳನ್ನು ಪಡೆಯುವ ಪ್ರಕ್ರಿಯೆ 4ರಿಂದ 5 ಗಂಟೆಗಳಲ್ಲಿ ಮುಕ್ತಾಯವಾಗಲಿದೆ. ಕೇವಲ 200ರಿಂದ 250 ಎಂ.ಎಲ್ ರಕ್ತವನ್ನು ಮಾತ್ರ ಪಡೆಯಲಾಗುತ್ತದೆ. ದಾನಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ದಾನ ಮಾಡಲು ಇಚ್ಛಿಸುವವರುdkms-bmst.org ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು’ ಎಂದು ಮಾಹಿತಿ ನೀಡಿದ್ದಾರೆ.

ಸಂಪರ್ಕಕ್ಕೆ: 080 68286500

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.