ADVERTISEMENT

‘ಆಕರಕೋಶ ದಾನಿಗಳೇ ಜೀವರಕ್ಷಕರು’

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2020, 16:10 IST
Last Updated 24 ಆಗಸ್ಟ್ 2020, 16:10 IST

ಬೆಂಗಳೂರು: ‘ರಕ್ತ ಕ್ಯಾನ್ಸರ್‌ ಮತ್ತು ಥಲಸ್ಸೇಮಿಯಾದಂತಹ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ರಕ್ತ ಆಕರ ಕೋಶ ದಾನ ಮಾಡುವವರೇ ಜೀವರಕ್ಷಕರು. ಆದರೆ, ದಾನಿಗಳ ಸಂಖ್ಯೆ ತೀರಾ ಕಡಿಮೆ ಇದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 0.03 ದಾನಿಗಳು ಮಾತ್ರ ನೋಂದಣಿ ಮಾಡಿಸಿದ್ದಾರೆ. ಇತರೆ ದೇಶಗಳಿಗೆ ಹೋಲಿಸಿದರೆ ಇದು ತೀರಾ ಕಡಿಮೆ’ ಎಂದು ವೈದ್ಯ ಡಾ. ಸುನೀಲ್‌ ಭಟ್ ಹೇಳಿದರು.

ಡಿಕೆಎಂಎಸ್ ಬಿಎಂಎಸ್‍ಟಿ ಫೌಂಡೇಷನ್ ಇಂಡಿಯಾ ಸಂಸ್ಥೆಯು ಬ್ಲಡ್‌ ಸ್ಟೆಮ್‌ ಸೆಲ್‌ ದಾನದ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಕ್ತ ಕ್ಯಾನ್ಸರ್‌ನಿಂದ ನರಳುತ್ತಿರುವ ರೋಗಿಗಳಿಗೆ ಬದುಕುವ ಎರಡನೇ ಅವಕಾಶವಾಗಿ ಇರುವ ಒಂದೇ ಆಸರೆ ಎಂದರೆ ರಕ್ತ ಆಕರ ಕೋಶ ದಾನ ಮಾಡುವುದು. ದಾನಿಗಳ ರಕ್ತದಿಂದ ಆಕರ ಕೋಶಗಳನ್ನು ಪಡೆದು ಅಸ್ಥಿಮಜ್ಜೆ ಹಾಳಾಗಿರುವಂತಹ ರೋಗಿಗಳಿಗೆ ಕಸಿ ಮಾಡಲಾಗುತ್ತದೆ. ಇದು ಅಗತ್ಯವಿರುವಂತಹ ರೋಗಿಗಳ ಕುಟುಂಬದಲ್ಲಿ ಹೊಂದಾಣಿಕೆಯಾಗಬಲ್ಲ ದಾನಿಗಳು ಸಿಗುವುದು ಶೇ 40 ಮಾತ್ರ. ಉಳಿದವರು ಸಂಬಂಧಿಗಳಲ್ಲದ ದಾನಿಗಳ ಮೇಲೆ ಅವಲಂಬಿತರಾಗಬೇಕಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT