ಬೆಂಗಳೂರು: ನಮ್ಮ ಮೆಟ್ರೊ ನೀಲಿ ಮಾರ್ಗವನ್ನು ಕೇಂದ್ರ ರೇಷ್ಮೆ ಮಂಡಳಿಯಿಂದ ಬೈಯಪ್ಪನಹಳ್ಳಿ ಡಿಪೊ ಪ್ರವೇಶ ಮಾರ್ಗದವರೆಗೆ (ಹಂತ 2ಎ) ಹಾಗೂ ಗುಲಾಬಿ ಮಾರ್ಗದಲ್ಲಿ ಕಾಳೇನ ಅಗ್ರಹಾರದಿಂದ ಎಂ.ಜಿ. ರಸ್ತೆವರೆಗಿನ (ರೀಚ್–6) ಕಾಮಗಾರಿಗಳನ್ನು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ರವಿಶಂಕರ್ ಜೆ. ಅವರು ಶನಿವಾರ ಪರಿಶೀಲಿಸಿದರು.
ಸಿವಿಲ್ ಕಾಮಗಾರಿ, ಫಿನಿಶಿಂಗ್ ಕಾರ್ಯಗಳು, ಹಳಿ ಅಳವಡಿಕೆ, ತಾಂತ್ರಿಕ ಅಂಶಗಳ ಬಗ್ಗೆ ಮಾಹಿತಿ ಪಡೆದರು. ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಮುಂದಿ ವರ್ಷ ಕಾರ್ಯಾರಂಭ ಮಾಡಲು ಕ್ರಮ ಕೈಗೊಳ್ಳಬೇಕು ಎಮದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.