ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನ ನೀಡುವ 2025ನೇ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿ ವೀಣಾ ಶಾಂತೇಶ್ವರ ಆಯ್ಕೆಯಾಗಿದ್ದಾರೆ.
ಕಮಲಿನಿ ಶಾ. ಬಾಲುರಾವ್ ಅವರು ಪ್ರತಿಷ್ಠಾನದಲ್ಲಿ ಈ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. ದತ್ತಿ ಪ್ರಶಸ್ತಿಯು ₹ 1 ಲಕ್ಷ ನಗದು ಒಳಗೊಂಡಿದೆ.
ಹಂ.ಪ. ನಾಗರಾಜಯ್ಯ, ರೂಪ ಹಾಸನ ಹಾಗೂ ಸೋಮಣ್ಣ ಅವರನ್ನು ಒಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ.
ನಿವೃತ್ತ ಪ್ರಾಧ್ಯಾಪಕರಾಗಿರುವ ವೀಣಾ ಶಾಂತೇಶ್ವರ ಅವರು, ಸ್ತ್ರೀ ಸಂವೇದನೆಯ ಕಥೆ, ಕಾದಂಬರಿಗಳನ್ನು ರಚಿಸಿದ್ದಾರೆ. ಅನ್ಯ ಭಾಷೆಯ ಕೃತಿಗಳನ್ನೂ ಕನ್ನಡಕ್ಕೆ ಅನುವಾದಿಸಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ತಿಳಿಸಿದ್ದಾರೆ.
ಇದೇ 25ರಂದು ಪ್ರತಿಷ್ಠಾನದ ಎಂ.ವಿ.ಸೀ. ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಸಾಹಿತಿ ಹಂ.ಪ. ನಾಗರಾಜಯ್ಯ ಅವರು ಪ್ರಶಸ್ತಿ ಪ್ರದಾನ ಮಾಡುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.