ADVERTISEMENT

ಬಿಎಂಸಿಆರ್‌ಐ: ‘ಹೆಚ್ಚುವರಿ ಸಹಾಯಕರಿಂದ ಸಮಸ್ಯೆ’

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 20:15 IST
Last Updated 7 ಏಪ್ರಿಲ್ 2022, 20:15 IST

ಬೆಂಗಳೂರು: ‘ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಅಡಿ (ಬಿಎಂಸಿಆರ್‌ಐ) ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳಿಗೆ ದಿನಕ್ಕೆ 2,500ಕ್ಕೂ ಅಧಿಕ ಹೊರ ರೋಗಿಗಳು ಬರುತ್ತಾರೆ. ಅವರು ತಮ್ಮ ಸಹಾಯಕ್ಕೆ ಒಬ್ಬರನ್ನು ಮಾತ್ರ ಕರೆತಂದರೆ ಆಸ್ಪತ್ರೆಗಳ ಆವರಣದಲ್ಲಿ ಸಂಬಂಧಿಗಳು ಕಾಯುವುದು ತಪ್ಪಲಿದೆ’ ಎಂದು ಬಿಎಂಸಿಆರ್‌ಐ ಡೀನ್ ಡಾ.ಕೆ. ರವಿ ತಿಳಿಸಿದರು.

ಬಿಎಂಸಿಆರ್‌ಐ ಅಡಿ ವಿಕ್ಟೋರಿಯಾ, ವಾಣಿವಿಲಾಸ, ಮಿಂಟೊ, ಟ್ರಾಮಾ ಕೇರ್ ಕೇಂದ್ರ, ನೆಫ್ರೊ–ಯೂರಾಲಜಿ ಸಂಸ್ಥೆ, ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್‌ಎಸ್‌ವೈ) ಆಸ್ಪತ್ರೆ ಹಾಗೂ ಇನ್‌ಸ್ಟಿಟ್ಯೂಟ್‌ ಆಫ್ ಗ್ಯಾಸ್ಟ್ರೊಎಂಟ್ರಾಲಜಿ ಸೈನ್ಸಸ್ ಆ್ಯಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್‌ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿವೆ. ಆಸ್ಪತ್ರೆಗಳ ಆವರಣದಲ್ಲಿ ರೋಗಿಗಳು ಹಾಗೂ ಅವರ ಸಂಬಂಧಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ‘ವಿಕ್ಟೋರಿಯಾ ಸಂಕೀರ್ಣ: ರಸ್ತೆಯಲ್ಲಿಯೇ ಆಕ್ರಂದನ’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಗುರುವಾರ ವಿಸ್ತೃತವಾದ ವರದಿ ಪ್ರಕಟವಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಸಿರುವಡಾ.ಕೆ. ರವಿ, ‘ವಿಕ್ಟೋರಿಯಾ,ಪಿಎಂಎಸ್‌ಎಸ್‌ವೈ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸಲಾಗುತ್ತಿದೆ. ಹೀಗಾಗಿ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ರೋಗಿಗಳು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆಗೆ ಬರುತ್ತಿದ್ದಾರೆ. ರೋಗಿಗಳ ಜತೆಗೆ ಎರಡು ಮೂರು ಮಂದಿ ಆಸ್ಪತ್ರೆಗೆ ಹೋದಲ್ಲಿ ಜನದಟ್ಟಣೆ ಉಂಟಾಗಿ, ಚಿಕಿತ್ಸೆಗೆ ಸಮಸ್ಯೆ ಆಗುತ್ತದೆ. ಆದ್ದರಿಂದ ಎಲ್ಲರ
ನ್ನೂ ಒಳಗೊಡೆ ಬಿಟ್ಟುಕೊಳ್ಳಲು ಸಾಧ್ಯವಿಲ್ಲ. ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಡಯಾಲಿಸಿಸ್‌ ಸೇರಿದಂತೆ ವಿವಿಧ ಚಿಕಿತ್ಸೆಗೆ ಬರುವ
ವರಿಗೆ ವಿಶ್ರಾಂತಿ ಧಾಮದಲ್ಲಿ ಇರಲು ಅವಕಾಶ ನೀಡಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

‘ಸಾವಿರ ಹಾಸಿಗೆಗಳ 11 ಮಹಡಿಗಳ ಕಟ್ಟಡ ನಿರ್ಮಾಣ ಕಾಮಗಾರಿಕೋವಿಡ್‌ನಿಂದಾಗಿ ಸ್ವಲ್ಪ ವಿಳಂಬವಾಯಿತು. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.