ADVERTISEMENT

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ‘ನಮ್ಮ ಮೆಟ್ರೊ’ದಿಂದ ಪೇಪರ್‌ ಟಿಕೆಟ್‌ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2023, 14:04 IST
Last Updated 11 ಆಗಸ್ಟ್ 2023, 14:04 IST
‘ನಮ್ಮ ಮೆಟ್ರೊ’
‘ನಮ್ಮ ಮೆಟ್ರೊ’   

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕೆ ‘ನಮ್ಮ ಮೆಟ್ರೊ’ ಸ್ವಾತಂತ್ರ್ಯ ದಿನಾಚರಣೆಯಂದು ಪೇಪರ್‌ ಟಿಕೆಟ್‌ ವ್ಯವಸ್ಥೆ ಮಾಡುತ್ತಿದೆ.

ಆಗಸ್ಟ್‌ 15ರಂದು (ಮಂಗಳವಾರ) ಲಾಲ್‌ಬಾಗ್‌ನಿಂದ ಪ್ರಯಾಣಿಸಲು ’ರಿಟರ್ನ್‌ ಜರ್ನಿ ಪೇಪರ್‌ ಟಿಕೆಟ್‌’ ಪರಿಚಯಿಸಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಅಂದು ಬೆಳಿಗ್ಗೆ 10ರಿಂದ ರಾತ್ರಿ 8ರ ತನಕ ಲಾಲ್‌ಬಾಗ್‌ ಮೆಟ್ರೊ ನಿಲ್ದಾಣದಿಂದ ಯಾವುದೇ ಮೆಟ್ರೊ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್‌ ದರ ₹ 30 ಇರಲಿದೆ. ಪೇಪರ್ ಟಿಕೆಟ್‌ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ. ಅಂದು ಬೆಳಿಗ್ಗೆ 8ರಿಂದ ಸಂಜೆ 6ರ ತನಕ ಎಲ್ಲ ಮೆಟ್ರೊ ನಿಲ್ದಾಣಗಳಲ್ಲಿ ಪೇಪರ್ ಟಿಕೆಟ್‌ ಖರೀದಿಸಬಹುದಾಗಿದೆ. ಲಾಲ್‌ಬಾಗ್‌ ಮೆಟ್ರೊ ನಿಲ್ದಾಣದಲ್ಲಿ 8 ಗಂಟೆವರೆಗೆ ಲಭ್ಯವಿರುತ್ತವೆ.

ADVERTISEMENT

ಪ್ರಯಾಣಿಕರು ಲಾಲ್‌ಬಾಗ್‌ ನಿಲ್ದಾಣದ ಎಎಫ್‌ಸಿ ಗೇಟ್ ಪ್ರವೇಶಿಸಲು, ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್‌ ಟಿಕೆಟ್‌ ಹಾಜರು ಪಡಿಸಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.