ADVERTISEMENT

ಗೈರು ಹಾಜರಿ: ಶಿಸ್ತು ಕ್ರಮ ಜರುಗಿಸದಂತೆ ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 18:55 IST
Last Updated 5 ಫೆಬ್ರುವರಿ 2021, 18:55 IST

ಬೆಂಗಳೂರು: ಲಾಕ್‌ಡೌನ್ ಸಂದರ್ಭದಲ್ಲಿ ಗೈರು ಹಾಜರಿಯಾಗಿರುವ ಪ್ರಕರಣಗಳನ್ನು ವಿಶೇಷ ಎಂದು ಪರಿಗಣಿಸಿ ಶಿಸ್ತು ಕ್ರಮ ಇಲ್ಲದೆ ಇತ್ಯರ್ಥಪಡಿಸಲು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

‘ಮಾ.23ರಿಂದ 90 ದಿನ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಯ ಗೈರು ಹಾಜರಿ ಪ್ರಕರಣಗಳನ್ನು ಲಘುವಾಗಿ ಪರಿಗಣಿಸಬೇಕು. ಈಗಾಗಲೇ ವಿಚಾರಣೆ ಆರಂಭಿಸಿದ್ದರೆ ಶಿಸ್ತು ಕ್ರಮ ಹಿಂಪಡೆಯಬೇಕು. ಈ ನಿರ್ದೇಶನಗಳು ಅ.1ರೊಳಗೆ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ನೌಕರರಿಗೆ ಮಾತ್ರ ಅನ್ವಯವಾಗುತ್ತದೆ’ ಎಂದು ತಿಳಿಸಿದ್ದಾರೆ.

ಲಾಕ್‌ಡೌನ್ ಸಡಿಲದ ಬಳಿಕವೂ ಅಕ್ಟೋಬರ್‌ನಿಂದ ಈವರೆಗೆ ರಜೆ ಪಡೆಯದೆ 809 ನೌಕರರು ಕರ್ತವ್ಯಕ್ಕೆ ದೀರ್ಘ ಕಾಲದ ಗೈರು ಹಾಜರಾಗಿದ್ದಾರೆ. ನಿಯಮಾನುಸಾರ ಈ ನೌಕರರಿಗೆ ಕರೆಯೋಲೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೂ ಪ್ರತಿಕ್ರಿಯೆ ಬಾರದಿದ್ದರೆ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.