ಬೆಂಗಳೂರು: ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಸಿಗದೆ ಘಟಕಗಳಲ್ಲೇ ಉಳಿಯುವ ಚಾಲಕ ಮತ್ತು ನಿರ್ವಾಹಕ ಸಿಬ್ಬಂದಿಯನ್ನು ಪ್ರಮುಖ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳುವ ಕೆಲಸಕ್ಕೆ ಬಿಎಂಟಿಸಿ ನಿಯೋಜಿಸಿದೆ.
ಪ್ರಯಾಣಿಕರ ಸಂಖ್ಯೆ ಹೆಚ್ಚಿಗೆ ಇರುವ ಸಮಯ ಅಂದರೆ ಬೆಳಿಗ್ಗೆ 8ರಿಂದ 11 ಗಂಟೆ ತನಕ ಮತ್ತು ಸಂಜೆ 4.30ರಿಂದ 7.30ರ ತನಕ ಬಸ್ ನಿಲ್ದಾಣಗಳಲ್ಲಿ ನಿಂತಿರುವ ಪ್ರಯಾಣಿಕರಿಗೆ ಸಿಬ್ಬಂದಿ ಸಲಹೆ ನೀಡಬೇಕು.
‘ಅಂತರ ಕಾಯ್ದುಕೊಂಡು ಸಾಲಾಗಿ ನಿಂತು ಬಸ್ ಹತ್ತುವಂತೆ ನೋಡಿಕೊಳ್ಳಬೇಕು. ಮಾಸ್ಕ್ ಧರಿಸದ ಪ್ರಯಾಣಿಕರು ಬಸ್ ಹತ್ತದಂತೆ ನೋಡಿಕೊಳ್ಳಬೇಕು. ಬಸ್ ನಿಲ್ದಾಣಗಳಲ್ಲಿ ನಿಂತಾಗಲೂ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಬೇಕು’ ಎಂದು ಸಂಸ್ಥೆ ಸುತ್ತೋಲೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.