ADVERTISEMENT

ಬೆಂಗಳೂರು | ಮರಕ್ಕೆ ಬಿಎಂಟಿಸಿ ಬಸ್‌ ಡಿಕ್ಕಿ: ಮೂವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 11 ಜನವರಿ 2024, 15:45 IST
Last Updated 11 ಜನವರಿ 2024, 15:45 IST
<div class="paragraphs"><p>ಬಿಎಂಟಿಸಿ ಬಸ್</p></div>

ಬಿಎಂಟಿಸಿ ಬಸ್

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಆರ್‌.ಟಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಭೂಪಸಂದ್ರದಲ್ಲಿ ಬುಧವಾರ ರಾತ್ರಿ ಬಿಎಂಟಿಸಿ ಬಸ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ADVERTISEMENT

ಗಾಯಗೊಂಡ ಪ್ರಯಾಣಿಕರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಬಸ್‌ನಲ್ಲಿದ್ದ ಚಾಲಕ, ನಿರ್ವಾಹಕ ಸೇರಿದಂತೆ ಎಲ್ಲ ಪ್ರಯಾಣಿಕರೂ ಅಪಾಯದಿಂದ ಪಾರಾಗಿದ್ಧಾರೆ.

‘ಚಾಲಕನಿಗೆ ದಿಢೀರ್ ತಲೆಸುತ್ತು ಬಂದು ಬಸ್‌ ಅನ್ನು ರಸ್ತೆಯ ಬದಿಗೆ ನಿಲುಗಡೆ ಮಾಡಲು ಪ್ರಯತ್ನಿಸಿದ್ದರು. ಆದರೆ, ಬಸ್ ನಿಯಂತ್ರಿಸಲು ಸಾಧ್ಯವಾಗದೇ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿ 15 ಪ್ರಯಾಣಿಕರು ಇದ್ದರು’ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.