ADVERTISEMENT

ಬೆಂಗಳೂರು | ಬಿಎಂಟಿಸಿ ಬಸ್‌ ಡಿಕ್ಕಿ: ಅರ್ಚಕ ಸಾವು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2025, 14:24 IST
Last Updated 1 ಸೆಪ್ಟೆಂಬರ್ 2025, 14:24 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಬೆಂಗಳೂರು: ವೈಟ್‌ಫೀಲ್ಡ್‌ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ವೃದ್ದರೊಬ್ಬರು ಮೃತಪಟ್ಟಿದ್ದಾರೆ.

ADVERTISEMENT

ವೈಟ್‍ಫೀಲ್ಡ್ ಬಳಿಯ ಚನ್ನಸಂದ್ರ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ ಡಿಕ್ಕಿಯಾಗಿದ್ದರಿಂದ ಚನ್ನಸಂದ್ರ ನಿವಾಸಿ ಶಂಕರ್ ನಾರಾಯಣ ಶಾಸ್ತ್ರಿ (80) ಮೃತಪಟ್ಟಿದ್ದಾರೆ.

ಗಣೇಶ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಶಂಕರ್ ನಾರಾಯಣ ಶಾಸ್ತ್ರಿ ಅವರು ರಾತ್ರಿ 8 ಗಂಟೆ ಸುಮಾರಿಗೆ ದೇವಸ್ಥಾನದಲ್ಲಿ ಪೂಜೆ ಮುಗಿಸಿ, ನಡೆದುಕೊಂಡು ಮನೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು.

ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಅಸ್ವಸ್ಥಗೊಂಡ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ಬಿಎಂಟಿಸಿಯ 29ನೇ ಡಿಪೊಗೆ ಸೇರಿದ ಬಸ್, ಟಿನ್ ಫ್ಯಾಕ್ಟರಿ ಕಡೆಯಿಂದ ಚನ್ನಸಂದ್ರಕ್ಕೆ ತೆರಳುತ್ತಿತ್ತು. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ತನಿಖೆಯಲ್ಲಿ ಗೊತ್ತಾಗಿದೆ. ಚಾಲಕನನ್ನು ಬಂಧಿಸಿ, ಬಸ್ ಜಪ್ತಿ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಮಹದೇವಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.