ADVERTISEMENT

ಬೆಂಗಳೂರು: ಬ್ರೇಕ್ ವೈಫಲ್ಯ; ಮರ, ಹೋಟೆಲ್‌ಗೆ ಬಸ್‌ ಡಿಕ್ಕಿ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 23:37 IST
Last Updated 8 ಫೆಬ್ರುವರಿ 2026, 23:37 IST
<div class="paragraphs"><p>ಬಸ್</p></div>

ಬಸ್

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‌ನ ಕಮಲಾನಗರದತ್ತ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ವೊಂದು ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿ ಮರ ಹಾಗೂ ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ.

ADVERTISEMENT

ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. 

ಇದೇ ವೇಳೆ ಬ್ರೇಕ್ ವೈಫಲ್ಯದಿಂದ ನಿಂತಿದ್ದ ಬಸ್‌ಗೆ ಹಿಂಬದಿಯಿಂದ ಬೈಕ್ ಹಾಗೂ ಕಾರು ಡಿಕ್ಕಿ ಹೊಡೆದ ಘಟನೆ ಸಹ ನಡೆದಿದೆ. ಯಾವುದೇ ಗಂಭೀರ ಅನಾಹುತ ಸಂಭವಿಸಿಲ್ಲ.

ಘಟನೆಯ ಮಾಹಿತಿ ತಿಳಿದ ಕೂಡಲೇ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಬಸ್‌ನಲ್ಲಿದ್ದ ಪ್ರಯಾಣಿಕರ ಯೋಗಕ್ಷೇಮ ವಿಚಾರಿಸಿದರು. ಅಲ್ಲದೇ ಸ್ಥಳಕ್ಕೆ ಬಿಎಂಟಿಸಿ ಅಧಿಕಾರಿಗಳನ್ನು ಕರೆಸಿ ಘಟನೆ ಸಂಬಂಧ ಮಾಹಿತಿ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.