ADVERTISEMENT

ಹಳದಿ ಮಾರ್ಗ ನಿಲ್ದಾಣಗಳಿಗೆ ಬಿಎಂಟಿಸಿ ಬಸ್‌ ಸಂಪರ್ಕ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 16:07 IST
Last Updated 17 ಡಿಸೆಂಬರ್ 2025, 16:07 IST
<div class="paragraphs"><p>ಹಳದಿ ಮಾರ್ಗ</p></div>

ಹಳದಿ ಮಾರ್ಗ

   

ಬೆಂಗಳೂರು: ನಮ್ಮ ಮೆಟ್ರೊ ಹಳದಿ ಮಾರ್ಗದ ಹಲವು ನಿಲ್ದಾಣಗಳ ಸಮೀಪ ಬಿಎಂಟಿಸಿ ಬಸ್‌ಗಳ ತಂಗುದಾಣ ಆರಂಭಿಸಲಾಗಿದೆ.

ರಾಷ್ಟ್ರೀಯ ವಿದ್ಯಾಲಯ ರಸ್ತೆ – ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ನಡುವಿನ ಈ ಮಾರ್ಗದಲ್ಲಿ ಬಯೋಕಾನ್ ಹೆಬ್ಬಗೋಡಿ, ಬೆರೆಟೇನ ಅಗ್ರಹಾರ, ಸಿಂಗಸಂದ್ರ, ಹೊಂಗಸಂದ್ರ, ಕೇಂದ್ರ ರೇಷ್ಮೆ ಮಂಡಳಿ, ಆರ್.ವಿ. ರಸ್ತೆ ನಿಲ್ದಾಣಗಳ ಬಳಿ ಹೊಸದಾಗಿ ಮೆಟ್ರೊ ತಂಗುದಾಣಗಳನ್ನು ಆರಂಭಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ, ಹೊಸ ರಸ್ತೆ, ರಾಗಿಗುಡ್ಡ ಮೆಟ್ರೊ ನಿಲ್ದಾಣಗಳ ಬಳಿಗೆ ಬಸ್‌ ತಂಗುದಾಣಗಳನ್ನು ಸ್ಥಳಾಂತರಿಸಲಾಗಿದೆ.

ADVERTISEMENT

ಜಯದೇವ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಕುಡ್ಲು ಗೇಟ್ ಹಾಗೂ ಇನ್ಫೋಸಿಸ್ ಫೌಂಡೇಷನ್ ಕೋನಪ್ಪನ ಅಗ್ರಹಾರ ಮೆಟ್ರೊ ನಿಲ್ದಾಣಗಳಲ್ಲಿ ಬಸ್ ತಂಗುದಾಣಗಳು ಈಗಾಗಲೇ 100 ಮೀಟರ್ ಒಳಗೆ ಲಭ್ಯವಿವೆ. ಹುಸ್ಕೂರು ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೊ ನಿಲ್ದಾಣಗಳಲ್ಲಿ ಸ್ಥಳದ ಕೊರತೆಯಿಂದಾಗಿ ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ.

ಬಿಎಂಆರ್‌ಸಿಎಲ್‌ ಮತ್ತು ಬಿಎಂಟಿಸಿ ಜಂಟಿಯಾಗಿ ಮಾರ್ಗ ಪರಿಶೀಲನೆ ಮಾಡಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಮ್ಮ ಮೆಟ್ರೊ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.