ಬೆಂಗಳೂರು: ನಗರದ ಎಚ್‌ಎಎಲ್ ಬಸ್ ನಿಲ್ದಾಣದ ಬಳಿ ಬಿಎಂಟಿಸಿ ಬಸ್‌ವೊಂದು ಸೋಮವಾರ ಬೆಳಿಗ್ಗೆ ಬೆಂಕಿಗೆ ಆಹುತಿಯಾಗಿದೆ.
ಬೆಳಿಗ್ಗೆ 5.30ರ ಸುಮಾರಿಗೆ ಮೆಜೆಸ್ಟಿಕ್ನಿಂದ ಕಾಡುಗೋಡಿಗೆ ಬಿಎಂಟಿಸಿ ಬಸ್ ತೆರಳುತ್ತಿತ್ತು. ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿಯು ಇಡೀ ಬಸ್‌ಗೆ ವ್ಯಾಪಿಸಿ ಹೊತ್ತಿ ಉರಿದಿದೆ. ತಕ್ಷಣವೇ ಎಚ್ಚೆತ್ತ ಚಾಲಕ ಬಸ್ ನಿಲ್ಲಿಸಿ, ಎಲ್ಲ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಿದ್ದಾರೆ.
ಎಚ್ಎಎಲ್ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಬಸ್ ಚಾಲಕ ಜಯಚಂದ್ರ ಮತ್ತು ನಿರ್ವಾಹಕ ಚೌಡಪ್ಪ ಅವರು ಸಮಯಪ್ರಜ್ಞೆಯಿಂದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದೆ. ಯಾರಿಗೂ ಗಾಯವಾಗಿಲ್ಲ. ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಬಿಎಂಟಿಸಿ ಎಂಜಿನಿಯರ್‌ಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.