ಯಲಹಂಕ:ಬಿಎಂಎಸ್ ತಾಂತ್ರಿಕ ಮತ್ತು ನಿರ್ವಹಣೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ತಾಂತ್ರಿಕ ಮತ್ತು ನಿರ್ವಹಣಾ ಮೇಳದಲ್ಲಿ ವಿದ್ಯಾರ್ಥಿಗಳು ಸಿದ್ಧಪಡಿಸಿದ್ದ 450 ಮಾದರಿಗಳನ್ನು ಪ್ರದರ್ಶಿಸಲಾಯಿತು. ಆನ್‌ಲೈನ್‌ನಲ್ಲಿಯೇ ಈ ಮಾದರಿಗಳು ಪ್ರದರ್ಶನಗೊಂಡವು.
ಐಒಟಿ, ತ್ರೀಡಿ ಪ್ರಿಂಟಿಂಗ್ ತಂತ್ರಜ್ಞಾನ, ದತ್ತಾಂಶ ವಿಶ್ಲೇಷಣೆ, ಹಸಿರು ಇಂಧನ, ರೊಬೊಟಿಕ್ಸ್, ವಸ್ತು ವಿಜ್ಞಾನ ಮತ್ತಿತರ ವಿಷಯಗಳಿಗೆ ಸಂಬಂಧಿಸಿದ ಮಾದರಿಗಳ ಪ್ರಾತ್ಯಕ್ಷಿಕೆ ಗಮನ ಸೆಳೆದವು.
ರೈತರಿಗೆ ಅನುಕೂಲವಾಗುವ ಕೃಷಿ ಸಲಕರಣೆಗಳು, ಕೋವಿಡ್ ಸಮಯದಲ್ಲಿ ಉಪಯುಕ್ತವೆನಿಸುವ ಮೊಬೈಲ್ ಆ್ಯಪ್‌ಗಳು ವಿಶೇಷವಾಗಿದ್ದವು.
‘ಆಯ್ದ ಅತ್ಯುತ್ತಮ ಪ್ರಾತ್ಯಕ್ಷಿಕೆಗಳಿಗೆ ಬಹುಮಾನ ನೀಡುವುದರ ಜೊತೆಗೆ ಅವುಗಳಿಗೆ ಉತ್ತೇಜನ ನೀಡಿ, ಹೆಚ್ಚಿನ ಸಂಶೋಧನೆ ಮಾಡಲು ಅನುವು ಮಾಡಿಕೊಡಲಾಗುವುದು’ ಎಂದು ಪ್ರಾಂಶುಪಾಲ ಡಾ. ಜಿ.ಎನ್. ಮೋಹನ್ ಬಾಬು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.