ನಿಯಂತ್ರಣ ತಪ್ಪಿ ಬೈಕ್, ಕಾರಿಗೆ ಡಿಕ್ಕಿಯಾದ ಬಿಎಂಟಿಸಿ ಬಸ್
ಬೆಂಗಳೂರು: ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ, ಬಿಎಂಟಿಸಿ ವೋಲ್ವೊ ಬಸ್ ಚಾಲಕನ ನಿಯಂತ್ರಣ ತಪ್ಪಿ ಎದುರು ಚಲಿಸುತ್ತಿದ್ದ ಬೈಕ್ ಹಾಗೂ ಕಾರಿಗೆ ಡಿಕ್ಕಿಯಾಗಿದೆ. ಇದರಿಂದ ಸರಣಿ ಅಪಘಾತ ಸಂಭವಿಸಿದೆ.
ಸೋಮವಾರ ಬೆಳಿಗ್ಗೆ 9.30ರ ಸುಮಾರಿಗೆ ಸಂಭವಿಸಿದ ಅಪಘಾತ ದೃಶ್ಯ ಬಸ್ನ ಸಿಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದಿಂದ ದ್ವಿಚಕ್ರ ವಾಹನ ಸವಾರನ ಕಾಲಿಗೆ ಗಾಯವಾಗಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಚ್ಎಸ್ಆರ್ ಲೇಔಟ್‌ಗೆ ಬಸ್ ಚಲಿಸುತ್ತಿತ್ತು. ಆಗ ಅಪಘಾತವಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಪ್ರಕರಣ ಸಂಬಂಧ ಚಾಲಕ ರಾಜಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.