ADVERTISEMENT

ವಿದ್ಯಾರ್ಥಿ ಪಾಸ್: ಜ.31ರ ತನಕ ಅವಕಾಶ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 16:59 IST
Last Updated 19 ಜನವರಿ 2021, 16:59 IST
ಬಿಎಂಟಿಸಿ
ಬಿಎಂಟಿಸಿ   

ಬೆಂಗಳೂರು: ಶಾಲಾ ಕಾಲೇಜುಗಳು ಆರಂಭವಾಗಿರುವ ಕಾರಣ ವಿದ್ಯಾರ್ಥಿಗಳು ಹಿಂದಿನ ವರ್ಷದ ಪಾಸ್ ಅಥವಾ ಕಾಲೇಜು ಗುರುತಿನ ಚೀಟಿ ತೋರಿಸಿ ಪ್ರಯಾಣ ಮಾಡಲು ಜ.31ರವರೆಗೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ.

2019–20ನೇ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್‌ಕಾರ್ಟ್ ವಿದ್ಯಾರ್ಥಿ ಪಾಸ್ ಅಥವಾ ಪ್ರಸಕ್ತ ಸಾಲಿನಲ್ಲಿ ಶಾಲಾ ಕಾಲೇಜಿಗೆ ದಾಖಲಾಗಿರುವ ಶುಲ್ಕ ರಶೀದಿ, ಗುರುತಿನ ಚೀಟಿ ತೋರಿಸಿ ಸಾಮಾನ್ಯ ಬಸ್‌ಗಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

2020–21ನೇ ಸಾಲಿನ ವಿದ್ಯಾರ್ಥಿ ಪಾಸ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಪಾಸ್ ಪಡೆಯಬಹುದಾಗಿದೆ. ಜ.31ರೊಳಗೆ ಪಾಸ್ ಪಡೆದುಕೊಳ್ಳಲು ಅವಕಾಶ ಇದೆ ಎಂದು ಸ್ಪಷ್ಟಪಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.