ADVERTISEMENT

ಬಿಎಂಟಿಸಿ ಬಸ್‌ ಚಕ್ರ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 16:09 IST
Last Updated 13 ಆಗಸ್ಟ್ 2025, 16:09 IST
<div class="paragraphs"><p>ಸಾವು</p></div>

ಸಾವು

   

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ನಗರದ ಹೊಸೂರು ಮುಖ್ಯರಸ್ತೆಯ ರೂಪೇನ ಅಗ್ರಹಾರ ಬಸ್ ನಿಲ್ದಾಣ ಬಳಿ ಬಿಎಂಟಿಸಿ ಬಸ್‌ ಹಾಗೂ ಸ್ಕೂಟರ್ ನಡುವೆ ಬುಧವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಸೈಯದ್ ಜಾಫರ್ ಹುಸೇನ್ (33) ಮೃತಪಟ್ಟ ಸವಾರ.

ಹೊಸೂರು ಮುಖ್ಯರಸ್ತೆಯ ಎಲೆಕ್ಟ್ರಾನಿಕ್ ಸಿಟಿ ಕಡೆಯಿಂದ ಸಿಲ್ಕ್ ಬೋರ್ಡ್ ಮೇಲ್ಸೇತುವೆ ಜಂಕ್ಷನ್‌ ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ವೊಂದು ಸ್ಕೂಟರ್‌ಗೆ ಡಿಕ್ಕಿಯಾದ ಪರಿಣಾಮ ಸವಾರ ರಸ್ತೆಯ ಮೇಲೆ ಬಿದ್ದಿದ್ದರು. ಅವರ ಮೇಲೆ ಬಿಎಂಟಿಸಿ ಬಸ್‌ನ ಚಕ್ರಗಳು ಹರಿದ ಪರಿಣಾಮ ಸೈಯದ್ ಜಾಫರ್ ಹುಸೇನ್ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಸಂಚಾರ ಪೊಲೀಸರು ಹೇಳಿದರು.

ಬಿಎಂಟಿಸಿ ಬಸ್ ಚಾಲಕ ಆರ್‌. ಜಯರಾಮಯ್ಯ ಅವರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಡಿವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.