ADVERTISEMENT

ವಾರಾಂತ್ಯ ಕರ್ಫ್ಯೂ: ಅಗತ್ಯ ಸೇವೆಗಷ್ಟೇ ಬಿಎಂಟಿಸಿ ಬಸ್

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 16:35 IST
Last Updated 5 ಜನವರಿ 2022, 16:35 IST
   

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಬಸ್‌ಗಳ ಕಾರ್ಯಾಚರಣೆ ಇರಲಿದೆ ಎಂದು ಬಿಎಂಟಿಸಿ ಸ್ಪಷ್ಟಪಡಿಸಿದೆ.

ಕಂಟೈನ್ಮೆಂಟ್‌ ವಲಯ ಹೊರತುಪಡಿಸಿ ಉಳಿದೆಡೆ ಬೆಳಿಗ್ಗೆ 6ರಿಂದ ರಾತ್ರಿ 10ರ ತನಕ ಶೇ 10ರಷ್ಟು ಅಗತ್ಯ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು. ಸರ್ಕಾರಿ, ಅರೆ ಸರ್ಕಾರಿ ನೌಕರರು, ಪೊಲೀಸ್, ಗೃಹರಕ್ಷಕ ದಳ, ಅಗ್ನಿಶಾಮಕ ಸೇರಿ ತುರ್ತು ಸೇವೆಯ ಸಿಬ್ಬಂದಿ, ಆಸ್ಪತ್ರೆ, ಅರೆ ಸರ್ಕಾರಿ, ಆಶಾ ಕಾರ್ಯಕರ್ತೆಯರು, ಮಾಧ್ಯಮ ಪ್ರತಿನಿಧಿಗಳು, ಬ್ಯಾಂಕ್ ಸಿಬ್ಬಂದಿಗೆ ಬಸ್‌ನಲ್ಲಿ ಪ್ರಯಾಣಿಸಲು ಅನುಮತಿ ಇದೆ.

‘ರೈಲು, ವಿಮಾನ ಪ್ರಯಾಣಿಕರು ಮಂಗಡ ಕಾಯ್ದಿರಿಸಿದ ಟಿಕೆಟ್ ತೋರಿಸಿ ಪ್ರಯಾಣ ಮಾಡಬಹುದು. ‍ಪರೀಕ್ಷೆಗೆ ಹಾಜರಾಗಬೇಕಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಬೇಕು. ಸರ್ಕಾರ ಅನುಮತಿ ನೀಡಿರುವ ಕೈಗಾರಿಕೆಗಳು ಮತ್ತು ಇತರ ವಲಯದ ಸಿಬ್ಬಂದಿ ಗುರುತಿನ ಚೀಟಿ ತೋರಿಸಿ ಪ್ರಯಾಣ ಮಾಡಬಹುದು’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ವಿವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.