ಬೆಂಗಳೂರು: ಬಿಎಂಟಿಸಿಯ ಉಳಿಕೆ ಮೂಲವೃಂದದ ನಿರ್ವಾಹಕರ ಖಾಲಿ ಹುದ್ದೆಗಳ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.
ಇದೇ ಸೆ. 1ರಂದು ಪರೀಕ್ಷೆ ನಡೆಸಲಾಗಿತ್ತು. 18ರಂದು ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿತ್ತು. ಆಕ್ಷೇಪಣೆಗಳ ಪರಿಶೀಲನೆಯ ನಂತರ ಅಂತಿಮ ಪಟ್ಟಿ ಪ್ರಕಟಿಸಲಾಗಿದ್ದು, ಬಿಎಂಟಿಸಿಗೆ ಹಸ್ತಾಂತರಿಸಲಾಗುವುದು ಎಂದು ಕೆಇಎ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.