
ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಚಿಕ್ಕೇಗೌಡನ ಪಾಳ್ಯದಲ್ಲಿ ಪತ್ನಿಯನ್ನು ಕೊಂದು ಬಿಎಂಟಿಸಿ ನಿವೃತ್ತ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೇಬಿ (60) ಕೊಲೆಯಾದವರು. ಕೃತ್ಯದ ಬಳಿಕ ವೆಂಕಟೇಶನ್ (65) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೆಂಕಟೇಶನ್ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪುತ್ರಿ ಮದುವೆಯಾಗಿ ಪತಿ ಮನೆಯಲ್ಲಿ ನೆಲಸಿದ್ದಾರೆ. ಬೇಬಿ ದಂಪತಿ, ಮಗ ಮತ್ತು ಸೊಸೆಯ ಜತೆಗೆ ಬಾಡಿಗೆ ಮನೆಯಲ್ಲಿ ವಾಸ ಆಗಿದ್ದರು.
ವೆಂಕಟೇಶನ್ ಅವರು ಐದು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಪತ್ನಿಯ ಆರೋಗ್ಯ ಸಮಸ್ಯೆಯಿಂದ ಬೇಸತ್ತಿದ್ದ ಪತಿ, ಕುಟುಂಬದ ಸದಸ್ಯರ ವಿರುದ್ಧ ಸಣ್ಣಪುಟ್ಟ ವಿಚಾರಕ್ಕೂ ಕೋಪಗೊಳ್ಳುತ್ತಿದ್ದರು ಎಂದು ಮೂಲಗಳು ಹೇಳಿವೆ.
‘ಪತ್ನಿ ಕೊಂದು ನಾನೂ ಸಾಯುತ್ತೇನೆ’ ಎಂದು ಹೇಳುತ್ತಿದ್ದರು. ವೆಂಕಟೇಶನ್ ಅವರ ಮಗ ಮತ್ತು ಸೊಸೆ ಮಂಗಳವಾರ ಕೆಲಸಕ್ಕೆ ಹೋಗಿದ್ದರು. ಆಗ ಪತ್ನಿಯ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾರೆ. ಬಳಿಕ ಅವರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು. ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.