ADVERTISEMENT

ರಸ್ತೆ ಮಧ್ಯೆ BMTC ಚಾಲಕರ ಗಲಾಟೆ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2025, 14:34 IST
Last Updated 1 ಸೆಪ್ಟೆಂಬರ್ 2025, 14:34 IST
ಪರಸ್ಪರ ಗಲಾಟೆ ಮಾಡುತ್ತಿದ್ದ ಬಿಎಂಟಿಸಿ ಸಿಬ್ಬಂದಿ 
ಪರಸ್ಪರ ಗಲಾಟೆ ಮಾಡುತ್ತಿದ್ದ ಬಿಎಂಟಿಸಿ ಸಿಬ್ಬಂದಿ    

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‌ನ ಕಂಠೀರವ ಸ್ಟುಡಿಯೊ ರಸ್ತೆಯಲ್ಲಿ ಬಿಎಂಟಿಸಿ ಚಾಲಕರಿಬ್ಬರು ಬಸ್‌ ಅನ್ನು ನಡುರಸ್ತೆಯಲ್ಲೇ ನಿಲುಗಡೆ ಮಾಡಿ, ಗಲಾಟೆ ಮಾಡಿಕೊಂಡಿದ್ದಾರೆ.

ವಿದ್ಯುತ್‌ ಚಾಲಿತ ಬಸ್‌ ಚಾಲಕರ ನಡುವೆ ಗಲಾಟೆ ಆಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಗಲಾಟೆ ಬಿಡಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಮುಂದೆ ಸಾಗಲು ಅವಕಾಶ ನೀಡಲಿಲ್ಲ ಎನ್ನುವ ವಿಚಾರಕ್ಕೆ ಚಾಲಕರು ಗಲಾಟೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಚಾಲಕರು ಪರಸ್ಪರ ಆರೋಪ–ಪ್ರತ್ಯಾರೋಪ ಮಾಡಿಕೊಳ್ಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು, ಗಲಾಟೆಯ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

ADVERTISEMENT

‘ಒಂದು ಬಸ್‌, ಮತ್ತೊಂದು ಬಸ್‌ಗೆ ತಾಗಿತು ಎನ್ನುವ ವಿಚಾರಕ್ಕೆ ಗಲಾಟೆ ಆಗಿದೆ. ಹಲವು ಬಾರಿ ಮನವಿ ಮಾಡಿದರೂ ಚಾಲಕರು ಗಲಾಟೆ ಮುಂದುವರಿಸಿದ್ದರು. ಇದರಿಂದ ಶಾಲೆಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುವ ಉದ್ಯೋಗಸ್ಥರಿಗೆ ತೊಂದರೆಯಾಯಿತು’ ಎಂದು ಪ್ರಯಾಣಿಕರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.