ADVERTISEMENT

ಬಿಎಂಟಿಸಿ ಎಲೆಕ್ಟ್ರಿಕ್ ಬಸ್-ಬೈಕ್‍ ನಡುವೆ ಅಪಘಾತ: ಯುವತಿ ಸಾವು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 15:23 IST
Last Updated 7 ಫೆಬ್ರುವರಿ 2026, 15:23 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಬೈಕ್‍ ನಡುವೆ ಕೆ.ಆರ್.ಪುರ ಮೆಟ್ರೊ ನಿಲ್ದಾಣದ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಯುವತಿ ಮೃತಪಟ್ಟಿದ್ದಾರೆ.

ADVERTISEMENT

ಹನ್ನಾ ಹಿಂಕಾ (20) ಮೃತ ಯುವತಿ. ಮಣಿಪುರದ ಹನ್ನಾ ಹಿಂಕಾ, ಮಾರತ್‍ಹಳ್ಳಿಯಲ್ಲಿ ವಾಸವಾಗಿದ್ದರು. ಸಲೂನ್‍ನಲ್ಲಿ ಕೆಲಸ ಮಾಡುತ್ತಿದ್ದ ಅವರು ಸಂಬಂಧಿ ಚಿನ್ನು ಸಬಾ ಜತೆ ಬೈಕ್‍ನಲ್ಲಿ ಹೆಬ್ಬಾಳಕ್ಕೆ ತೆರಳುತ್ತಿದ್ದರು. ಆಗ ಅಪಘಾತ ನಡೆದಿದೆ ಎಂದು ಪೊಲೀಸರು ಹೇಳಿದರು.

ಬಿಎಂಟಿಸಿ ಬಸ್, ಹನ್ನಾ ಅವರ ಬೈಕ್‍ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಆಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಹನ್ನಾ ಮೇಲೆ ಬಸ್‍ನ ಮುಂದಿನ ಚಕ್ರಗಳು ಹರಿದಿವೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ಬೈಕ್ ಚಾಲನೆ ಮಾಡುತ್ತಿದ್ದ ಚಿನ್ನು ಸಬಾ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

‘ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕ ಅತಿವೇಗವಾಗಿ ಬಸ್ ಚಾಲನೆ ಮಾಡುತ್ತಿದ್ದ. ಅದೇ ಘಟನೆಗೆ ಕಾರಣವಾಗಿದೆ. ಬಸ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು. ಮಹದೇವಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.