ADVERTISEMENT

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ: BMTC ಎಲೆಕ್ಟ್ರಿಕ್‌ ಬಸ್‌ ಚಾಲಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2025, 17:42 IST
Last Updated 23 ಅಕ್ಟೋಬರ್ 2025, 17:42 IST
   

ಬೆಂಗಳೂರು: ಬೋನಸ್‌, ವೇತನಭತ್ಯೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೀಪಾಂಜಲಿನಗರ ಬಿಎಂಟಿಸಿ ಘಟಕದ ಎಲೆಕ್ಟ್ರಿಕ್‌ ಬಸ್‌ (ಇವಿ) ಚಾಲಕರು ಗುರುವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದರು. 

ಡಿಪೊದಲ್ಲಿ 100ಕ್ಕೂ ಹೆಚ್ಚು ಬಸ್‌ಗಳ ಚಾಲಕರು ಪ್ರತಿಭಟನೆಯಲ್ಲಿ ಭಾಗವಹಿಸಿ, ಆಕ್ರೋಶ ವ್ಯಕ್ತಪಡಿಸಿದರು.

‘ಕಳೆದ ಎರಡು ವರ್ಷಗಳಿಂದ ಹಾಜರಾತಿ ಬೋನಸ್‌, ವೇತನ ಭತ್ಯೆ ಪಾವತಿ ಮಾಡಿಲ್ಲ. ಅಪಘಾತಗಳು ಸಂಭವಿಸಿದಾಗ ಬಿಎಂಟಿಸಿ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು.

ADVERTISEMENT

‘ಬಸ್‌ ಚಾಲಕರು ಪ್ರತಿಭಟನೆ ನಡೆಸಿದ್ದರಿಂದ ಎರಡು ಮೂರು ಗಂಟೆ ಕಾಲ 38ಕ್ಕೂ ಹೆಚ್ಚು ಮಾರ್ಗದಲ್ಲಿ ಸಂಚರಿಸುವ ಇವಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯವಾಯಿತು. ಪ್ರತಿಭಟನನಿರತ ಚಾಲಕರೊಂದಿಗೆ ಮಾತನಾಡಿ ಅವರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ಚಾಲಕರು ಕರ್ತವ್ಯಕ್ಕೆ ಹಾಜರಾದರು’ ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.