ADVERTISEMENT

ಬಿಎಂಟಿಸಿ ಪರೀಕ್ಷೆ: ಬಂಧಿತ ಆರೋಪಿ ಟಾಪರ್‌

ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 5 ಜನವರಿ 2019, 20:10 IST
Last Updated 5 ಜನವರಿ 2019, 20:10 IST

ಬೆಂಗಳೂರು: ಪೊಲೀಸ್ ಕಾನ್‌ಸ್ಟೆಬಲ್‌ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಡಿ ಬಂಧಿಸಲಾಗಿರುವಸೋಮಪ್ಪ ಮೇಲಿನಮನಿ (34) ಎಂಬಾತ, ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ನಡೆಸಿದ್ದ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ.

ವಿಜಯಪುರ ಜಿಲ್ಲೆಯ ಸೋಮಪ್ಪ, ನಾಲ್ಕು ತಿಂಗಳಿಂದ ಜಿಗಣಿ ಡಿಪೊದಲ್ಲಿ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಇತ್ತೀಚೆಗಷ್ಟೇ ಆತನನ್ನು ಬಂಧಿಸಿದ್ದರು.

‘ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜ. 7ರವರೆಗೆ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಜೊತೆಗೆ ಬಿಎಂಟಿಸಿ ಪರೀಕ್ಷೆಯ ಫಲಿತಾಂಶ ಪಟ್ಟಿಯನ್ನು ಪರಿಶೀಲಿಸಲಾಗಿದ್ದು, ಅದರಲ್ಲಿ ಸೋಮಪ್ಪನ ಹೆಸರು ಮೊದಲ ಸ್ಥಾನದಲ್ಲಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.