ADVERTISEMENT

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ: ಕ್ಯಾಮ್ಸ್‌ ಪತ್ರ

​ಪ್ರಜಾವಾಣಿ ವಾರ್ತೆ
Published 12 ಜುಲೈ 2018, 18:40 IST
Last Updated 12 ಜುಲೈ 2018, 18:40 IST

ಬೆಂಗಳೂರು: ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡುವ ವಿದ್ಯಾರ್ಥಿಗಳಿಗೆ ಇನ್ನೂ ಪಾಸ್‌ ನೀಡದಿರುವುದರಿಂದ ತೊಂದರೆಯಾಗುತ್ತಿದೆ; ಇದಕ್ಕಾಗಿ ತಾತ್ಕಾಲಿಕವಾಗಿ ಉಚಿತ ಪ್ರಯಾಣಕ್ಕೆ ಅನುಮತಿ ನೀಡಬೇಕೆಂದು ಕೋರಿ ಸಾರಿಗೆ ಸಚಿವಡಿ.ಸಿ ತಮ್ಮಣ್ಣ ಅವರಿಗೆ ಕ್ಯಾಮ್ಸ್‌ (ಖಾಸಗಿ ಅನುದಾನ ರಹಿತ ಶಾಲೆಗಳ ರಾಜ್ಯ ಸಂಘಟನೆ) ಪತ್ರಬರೆದಿದೆ.

‘ಶಾಲೆಗಳು ಪ್ರಾರಂಭವಾಗಿ ಒಂದು ತಿಂಗಳು ಕಳೆದರೂ ಬಸ್‌ ಪಾಸ್ ನೀಡದೇ ಇರುವುದು ವಿಷಾದನೀಯ. ಸಮವಸ್ತ್ರದಲ್ಲಿರುವ ಹಾಗೂ ಐ.ಡಿ ಕಾರ್ಡ್‌ ಹೊಂದಿರುವ ಮಕ್ಕಳಿಗೆ ಉಚಿತ ಸೌಲಭ್ಯ ನೀಡಬೇಕು’ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT