ADVERTISEMENT

ಪ್ರಯಾಣ ದರ ಇಳಿಕೆ: ಬಿಎಂಟಿಸಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 20:30 IST
Last Updated 16 ಡಿಸೆಂಬರ್ 2019, 20:30 IST
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಮೂರನೇ ಗೇಟ್‌ನಿಂದ ಆರಂಭವಾದ ಬಸ್ ಸೇವೆಗೆ ‌ಸಂಸದ ಪಿ.ಸಿ. ಮೋಹನ್ ಸೋಮವಾರ ಚಾಲನೆ ನೀಡಿದರು. ರೈಲ್ವೆ ಬೆಂಗಳೂರು ವಿಭಾಗೀಯ ವ್ಯವಸ್ಥಾಪಕ ಅಶೋಕ್‌ಕುಮಾರ್ ವರ್ಮಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ, ಸಂಸ್ಥೆ ಅಧ್ಯಕ್ಷ ಎನ್‌.ಎಸ್‌.ನಂದೀಶ್‌ ರೆಡ್ಡಿ ಇದ್ದರು

ಬೆಂಗಳೂರು: ಬಸ್‌ ಪ್ರಯಾಣ ದರ ಇಳಿಕೆ ಮಾಡಲು ಸಾಧ್ಯವೇ ಎಂಬುದರ ಬಗ್ಗೆ ಬಿಎಂಟಿಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬಸ್ ಪ್ರಯಾಣದರ ಇಳಿಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಾಧಕ–ಬಾಧಕಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ನಗರದಲ್ಲಿ ಬಸ್‌ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ಕಡಿಮೆ ಮಾಡುವುದು ಸರ್ಕಾರದ ಉದ್ದೇಶ.

‘ಬಿಎಂಟಿಸಿ ಬಸ್ ಸಂಚರಿಸುತ್ತಿರುವ ಎಲ್ಲಾ ಮಾರ್ಗಗಳ ದರದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಕೆಲಸ ಮುಗಿದ ಬಳಿಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಲಾಗುವುದು. ಸದ್ಯ ಕಡಿಮೆ ಮಾಡಬೇಕೋ, ಬೇಡವೋ ಎಂಬುದರ ಬಗ್ಗೆ ಯಾವ ತೀರ್ಮಾನವೂ ಆಗಿಲ್ಲ’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.