ಬೆಂಗಳೂರು: ವಿದ್ಯಾರ್ಥಿಗಳುಬಿಎಂಟಿಸಿ ಬಸ್‌ಗಳಲ್ಲಿ ಶುಲ್ಕ ರಶೀದಿ ಅಥವಾ ಶಿಕ್ಷಣ ಸಂಸ್ಥೆಯ ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಲು ಡಿ.15ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
‘ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ 2021–22ನೇ ಶೈಕ್ಷಣಿಕ ಸಾಲಿನ 1ರಿಂದ 10ನೇ ತರಗತಿ, ಪಿಯುಸಿ, ಐಟಿಐ, ಪದವಿ, ಸ್ನಾತಕೋತ್ತರ ಪದವಿ, ಸಂಜೆ ಕಾಲೇಜು ಹಾಗೂ ಪಿಎಚ್.ಡಿ ವಿದ್ಯಾರ್ಥಿಗಳು ಪಾಸ್ ಪಡೆಯಲು ಸಮಯಾವಕಾಶ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳು ಪಾಸ್ ಬದಲಿಗೆರಶೀದಿ, ಗುರುತಿನ ಚೀಟಿ ತೋರಿಸಿ ಡಿ.15ರವರೆಗೆ ಮಾತ್ರ ಪ್ರಯಾಣಿಸಬಹುದು’ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.