ADVERTISEMENT

ಬಿಎಂಟಿಸಿ: ಕಾರ್ಮಿಕರಿಗೆ ‘ಸಹಾಯಹಸ್ತ’ ಪಾಸ್‌ ಬದಲಿಗೆ ಸ್ಮಾರ್ಟ್‌ಕಾರ್ಡ್‌

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 1:07 IST
Last Updated 30 ನವೆಂಬರ್ 2022, 1:07 IST
   

ಬೆಂಗಳೂರು: ಬಿಎಂಟಿಸಿಯು (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸಹಯೋಗದೊಂದಿಗೆ ನೋಂದಾಯಿತ ಕಾರ್ಮಿಕರಿಗೆ ‘ಸಹಾಯಹಸ್ತ’ ಬಸ್‌ ಪಾಸ್‌ಗಳ ಬದಲಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಲಿದೆ.

ಸಂಸ್ಥೆಯ ಬಸ್‌ ನಿಲ್ದಾಣಗಳು ಹಾಗೂ ಘಟಕಗಳಲ್ಲಿ ಡಿಸೆಂಬರ್‌ 1ರಿಂದ ಪಾಸ್‌ ವಿತರಣೆಯನ್ನು ಸ್ಥಗಿತಗೊಳಿಸಿ, ಸೇವಾಸಿಂಧು ಪೋರ್ಟಲ್‌ ಮೂಲಕ ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಸ್ಮಾರ್ಟ್‌ಕಾರ್ಡ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ನೋಂದಣಿಯಾಗಿರುವ ಗುರುತಿನ ಚೀಟಿಯೊಂದಿಗೆ ಆಧಾರ್‌ ಕಾರ್ಡ್‌ ಪ್ರತಿಯನ್ನೂ ಸ್ಮಾರ್ಟ್‌ಕಾರ್ಡ್‌ ಪಡೆಯುವವರು ತೋರಿಸಬೇಕು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT