ಬಿಎಂಟಿಸಿ ಬಸ್
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳು ನಡೆಯುವ ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲು ಬಿಎಂಟಿಸಿ ನಿರ್ಧರಿಸಿದೆ.
ಏಪ್ರಿಲ್ 2, 10, 18, 24, ಮೇ 3, 13 ಮತ್ತು 17ರಂದು ಐಪಿಎಲ್ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಈ ದಿನಗಳಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಚ್‌ಎಎಲ್ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣಕ್ಕೆ, ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್ ಸಿಟಿಗೆ, ನಾಗವಾರ–ಟ್ಯಾನರಿ ರಸ್ತೆ ಮೂಲಕ ಆರ್.ಕೆ. ಹೆಗಡೆ ನಗರಕ್ಕೆ, ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್‌ಶಿಪ್‌ಗೆ ಸಂಚರಿಸಲಿವೆ. ಸರ್ಜಾಪುರ, ಬನ್ನೇರುಘಟ್ಟ ಮೃಗಾಲಯ, ಹೊಸಕೋಟೆ, ಬನಶಂಕರಿ ನಿಲ್ದಾಣಗಳಿಗೆ ಬಸ್ ಇರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.